ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOSANAGARA / SHIMOGA NEWS | 26 JUNE 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮುಸುಕಿನ ಜೋಳದ ಗಿಡಗಳ ನಡುವೆ ಗಾಂಜಾ ಬೆಳೆದ ಆರೋಪಿಗೆ ಶಿವಮೊಗ್ಗದ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲವಾದರೆ ಇನ್ನೊಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗಲಿದೆ ಎಂದು ತೀರ್ಪು ನೀಡಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೊಲದಲ್ಲಿ 210 ಕೆ.ಜಿ.ಗಾಂಜಾ
ಹೊಸನಗರ ತಾಲೂಕು ನೆವಟೂರು ಗ್ರಾಮದ ಮಂಜುನಾಥಾಚಾರಿ (63) ಎಂಬುವವರ ಹೊಲದಲ್ಲಿ ಗಾಂಜಾ ಬೆಳೆದ ಖಚಿತ ಮಾಹಿತಿ ಮೇರೆಗೆ ಸಿಇಎನ್ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಮುಸುಕಿನ ಜೋಳದ ಗಿಡಗಳ ನಡುವೆ ಬೆಳೆಸಲಾಗಿದ್ದ 210 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮುಸ್ತಫಾ ಹುಸೇನ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪ ಸಾಬೀತಾದ ಹಿನ್ನೆಲೆ ಮಂಜುನಾಥಾಚಾರಿಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಸಾವಿರ ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಕಟ್ಟದೆ ಇದ್ದರೆ ಇನ್ನೊಂದು ವರ್ಷ ಸಾಧಾರಣ ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.
ಸಿಇಎನ್ ಠಾಣೆ ಇನ್ಸ್ ಪೆಕ್ಟರ್ ಸಂಗನಾಥ್ ಮತ್ತು ಸಿಬ್ಬಂದಿಗಳು, ತಹಶೀಲ್ದಾರ್ ಅಗಿದ್ದ ಚಂದ್ರಶೇಖರ್ ನಾಯ್ಕ್ ಅವರ ಜೊತೆ ದಾಳಿ ನಡೆಸಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]