ಶಿವಮೊಗ್ಗ ಲೈವ್
ರಿಪ್ಪನ್ಪೇಟೆ: ಸಮೀಪದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ನೆರವೇರಿತು.
ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್ ಜೋಯ್ಸ್ ಹಾಗೂ ಪುರೋಹಿತ ಬಳಗದ ಸಹಯೋಗದಲ್ಲಿ ದೇವಿಗೆ ವಿಶೇಷ ಪೂಜೆ ಜರುಗಿತು. ಸಾವಿರಾರು ಭಕ್ತರು ಆಗಮಿಸಿ ಇಷ್ಟಾರ್ಥ ಸಿದ್ಧಿಗಾಗಿ ಹಣ್ಣು-ಕಾಯಿ ಹರಕೆ ಒಪ್ಪಿಸಿದರು. ಮುತ್ತೈದೆಯರು ದೇವಿಗೆ ಉಡಿ ಸೇವೆ ಸಲ್ಲಿಸಿ ಆಶೀರ್ವಾದ ಪಡೆದರು.

ಬಹುಸಂಖ್ಯಾತ ಈಡಿಗ ಸಮುದಾಯದ ಆರಾಧ್ಯ ದೈವವಾಗಿರುವ ಜೇನುಕಲ್ಲಮ್ಮ ದೇವಿಯ ಎರಡನೇ ಜಾತ್ರಾ ಮಹೋತ್ಸವವು ಅಕ್ಟೋಬರ್ 2ರ, ಅ.6 ರಂದು ಹಾಗೂ ಅ.9 ರಂದು ದೇವಿಯ ವೈಭವದ ಜಾತ್ರಾ ಮಹೋತ್ಸವವು ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಕಲಗೋಡು ರತ್ನಾಕರ, ಕಾರ್ಯದರ್ಶಿ ಗುರುರಾಜ ಭಟ್ ಸೇರಿದಂತೆ ವ್ಯವಸ್ಥಾಪನಾ ಸಮಿತಿ ಹಾಗೂ ಜಾತ್ರಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.