ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 APRIL 2023
RIPPONPETE : ಹೊಂಬುಜ ಮಠದ (Hombuja) ಗುಡ್ಡದ ಬಸದಿ ತ್ರಿಕೂಟ ಜಿನಾಲಯದಲ್ಲಿ ವಾರ್ಷಿಕ ಪೂಜಾ ಮಹೋತ್ಸವ ನೆರವೇರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಾರ್ಶ್ವನಾಥ ಸ್ವಾಮಿ, ಶಾಂತಿನಾಥ ಸ್ವಾಮಿ, ಬಹುಬಲಿ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು 108 ಕಳಶಾಭಿಷೇಕ ನಡೆಯಿತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದೇ ವೇಳೆ ಧರಣೇಂದ್ರ ಯಕ್ಷ ಮತ್ತು ಪದ್ಮಾವತಿ ದೇವಿಯ ವಿಶೇಷ ಪೂಜೆ ನೆರವೇರಿಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಾನ್ನಿಧ್ಯ ವಹಿಸಿದ್ದ ಹೊಂಬುಜ (Hombuja) ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಸಾಮರಸ್ಯದ ಸಮಾಜ ನಿರ್ಮಾಣ ಮಾಡುವುದು ಪ್ರತಿ ಪ್ರಜೆಯ ಕರ್ತವ್ಯ. ಈ ಹೊಣೆಗಾರಿಕೆಯನ್ನು ಅನುಷ್ಠಾನಗೊಳಿಸಲು ಜನರು ಆದ್ಯತೆ ನೀಡಬೇಕು. ಅಜ್ಞಾನ, ಅಂಧಕಾರ ಅಳಿಸಿ, ಬೆಳಕಿನಡೆಗೆ ಸಾಗುವ ಜ್ಞಾನಶಕ್ತಿಯ ಪ್ರಭೆಯು ಪ್ರತಿಯೊಬ್ಬರಲ್ಲಿಯು ಹೊರಹೊಮ್ಮಲಿ ಎಂದರು.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ವಿಮಾನ, ಸಂಸದ ರಾಘವೇಂದ್ರ ಹೇಳಿದ್ದೇನು? ಯಾವಾಗ ಶುರುವಾಗುತ್ತೆ ಹಾರಾಟ?