ಮರದಿಂದ ಬಿದ್ದು ಕಾಳಿಂಗ ಸರ್ಪ ಸಾವು, ಎಲ್ಲಿ? ಹೇಗಾಯ್ತು?

ಹೊಸನಗರ: ಮರದಿಂದ ಬಿದ್ದು ಕಾಳಿಂಗ ಸರ್ಪವೊಂದು (King Cobra) ಮೃತಪಟ್ಟ ಘಟನೆ ಹೊಸನಗರ ತಾಲೂಕು ಮೂಡುಗೊಪ್ಪ ನಗರದ ಪಂಚಮುಖಿ ಆಂಜನೇಯ ದೇವಸ್ಥಾನ ಸಮೀಪ ನಡೆದಿದೆ.

ಇದನ್ನೂ ಓದಿ » ಕ್ಯಾಂಟರ್‌ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ ಜನ

ಇಲ್ಲಿನ ಗುರುರಾಜ್ ಎಂಬುವವರ ಜಮೀನಿನ ಸಮೀಪ ಸುಮಾರು 12 ಅಡಿ ಉದ್ದದ ಸರ್ಪ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿತ್ತು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದರು.

ಕಾಳಿಂಗ ಸರ್ಪ ಎತ್ತರದ ಮರದಿಂದ ಬಿದ್ದು ಮೃತಪಟ್ಟಿರುವುದಾಗಿ ವರದಿ ಸಲ್ಲಿಸಿದ್ದಾರೆ. ಬಳಿಕ ಮೃತ ಕಾಳಿಂಗ ಸರ್ಪದ ಅಂತ್ಯಸಂಸ್ಕಾರ ನಿಯಮಾನುಸಾರ ನಗರ ಆರ್‌ಎಫ್‌ಒ ಸಂತೋಷ ಮಲ್ಲನ ಗೌಡ ಸಮ್ಮುಖದಲ್ಲಿ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ನಡೆಯಿತು.

HOSANAGARA-NEWS-GENERAL

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment