RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ ಮತ ಪಡೆದ ಸದಸ್ಯರು, ತಮ್ಮ ನೈಜ ಕರ್ತವ್ಯ ಅರಿತುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
![]() |
ಜನರ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯಿತಿ ಕಚೇರಿಯನ್ನು ತೆರೆದಿಡುವ ಬದಲು ತಮ್ಮ ಮನೆಗಳಿಗೆ ಸೀಮಿತರಾಗಿರುವ ಸದಸ್ಯರ ನಡವಳಿಕೆ ಒಪ್ಪುವಂತಹದ್ದಲ್ಲ. ಜನಪರವಾಗಿ ಇರಬೇಕಾದ ಗ್ರಾಮ ಪಂಚಾಯಿತಿ ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಸರ್ಕಾರ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200