ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ

RIPPONPETE NEWS, 8 OCTOBER 2024 : ಮೂರಾಲ್ಕು ದಿನಗಳಿಂದ ಗ್ರಾಮ ಪಂಚಾಯಿತಿ (Grama Panchayat) ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಗ್ರಾಮದ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಹೋರಾಟಗಾರ ಟಿ.ಆರ್. ಕೃಷ್ಣಪ್ಪ ಗ್ರಾಮ ಪಂಚಾಯಿತಿ ಕಚೇರಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮುಷ್ಕರದ ಕಾರಣಕ್ಕೆ ಗ್ರಾಮಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ. ಹಾಗಿದ್ದರೆ ಜನಪ್ರತಿನಿಧಿಗಳ ಅಗತ್ಯವೇನಿದೆ. ಚುನಾವಣೆಯಲ್ಲಿ ಜನರ ಎಲ್ಲ ದೂರುದುಮ್ಮಾನಗಳಿಗೂ ಪರಿಹಾರ ಕಲ್ಪಿಸುತ್ತೇವೆ ಎಂದು ಹೇಳಿ ಮತ ಪಡೆದ ಸದಸ್ಯರು, ತಮ್ಮ ನೈಜ ಕರ್ತವ್ಯ ಅರಿತುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

TR-Krishnappa-protest-at-ripponpete-grama-panchayat-office

ಜನರ ಕೆಲಸ ಕಾರ್ಯಗಳಿಗಾಗಿ ಗ್ರಾಮ ಪಂಚಾಯಿತಿ ಕಚೇರಿಯನ್ನು ತೆರೆದಿಡುವ ಬದಲು ತಮ್ಮ ಮನೆಗಳಿಗೆ ಸೀಮಿತರಾಗಿರುವ ಸದಸ್ಯರ ನಡವಳಿಕೆ ಒಪ್ಪುವಂತಹದ್ದಲ್ಲ. ಜನಪರವಾಗಿ ಇರಬೇಕಾದ ಗ್ರಾಮ ಪಂಚಾಯಿತಿ ಸದಸ್ಯರು ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಸರ್ಕಾರ ಅವರ ಸದಸ್ಯತ್ವ ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ » ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

Leave a Comment