ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ, ಅದೃಷ್ಟವಶಾತ್‌ ತಪ್ಪಿದ ಅನಾಹುತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಹೊಸನಗರ: ಪಟ್ಟಣದ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ಮೋರಿ ತಿರುವಿನಲ್ಲಿ ಸೋಮವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಾಗರದಿಂದ ಹೊಸನಗರದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಜಯನಗರದಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಯಲ್ಲೇ ವಾಹನಗಳು ಸಿಲುಕಿಕೊಂಡಿದ್ದರಿಂದ ಕೆಲಕಾಲ ಸಂಚಾರ ಸಂಪೂರ್ಣ ವ್ಯತ್ಯಯವಾಗಿತ್ತು.

KSRTC-Bus-and-Truck-accident-near-Hosanagara.

ವಿಷಯ ತಿಳಿದ ತಕ್ಷಣ ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವಾಹನಗಳನ್ನು ಪಕ್ಕಕ್ಕೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!