ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ರಿಪ್ಪನ್‌ಪೇಟೆ: ಸಮೀಪದ ಹೊಂಬುಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಸೂರು ಗ್ರಾಮದ ಶಾಲಾ ಆವರಣದ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಭೀತಿ ಮೂಡಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ವ್ಯಕ್ತಿಯೊಬ್ಬರಿಗೆ ಚಿರತೆ ಕಣ್ಣಿಗೆ ಬಿದ್ದಿದೆ. ಅವರು ಈ ಕುರಿತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಈಚೆಗೆ ಗ್ರಾಮದಲ್ಲಿ ಮೇಯಲು ಬಿಟ್ಟಿದ್ದ ಜಾನುವಾರುಗಳು ಕಾಣೆಯಾಗಿರುವ ಬಗ್ಗೆ ವರದಿಯಾಗಿತ್ತು. ಅವುಗಳ ಮೇಲೆ ಚಿರತೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

RIPPONPETE-NEWS-GRAPHICS-BY-SHIVAMOGGA-LIVE

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಬೇಕು. ಚಿರತೆಯ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸಿ, ಬೋನು ಇಟ್ಟು ಅದನ್ನು ತಕ್ಷಣವೇ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಕಡಸೂರು ನಿವಾಸಿಗಳು ಒತ್ತಾಯಿಸಿದ್ದಾರೆ.