ಶಿವಮೊಗ್ಗ ಲೈವ್
ಹೊಸನಗರ: ಚಿರತೆ ದಾಳಿಗೆ ಎರಡು ವರ್ಷದ ಕರು ಮೃತಪಟ್ಟಿದೆ. ತಾಲ್ಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲುಮನೆ ಗ್ರಾಮದಲ್ಲಿ ಘಟನೆ ನಡೆದಿದೆ. ಹಿಂಡ್ಲುಮನೆಯ ಶ್ರೀಮತಿ ಎಂಬುವವರಿಗೆ ಸೇರಿದ ಕರುವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ವೇಳೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಅದರ ಗಂಟಲಿನ ಭಾಗಕ್ಕೆ ಗಂಭೀರ ಗಾಯಗೊಳಿಸಿದೆ. ಇದರಿಂದಾಗಿ ಚಿರತೆ ಮೃತಪಟ್ಟಿದೆ. ಕಳೆದ ಕೆಲವು ದಿನಗಳಿಂದ ಹಿಂಡ್ಲುಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
