ರಿಪ್ಪನ್ಪೇಟೆ: ಜೈನ ಧರ್ಮದ 24ನೇ ತೀರ್ಥಂಕರ ಮಹಾವೀರ ಜಯಂತಿ (Mahaveera Jayanti) ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಹೊಂಬುಜದಲ್ಲಿ ಅತ್ಯಂತ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.
ಮಠದ ಪೀಠಾಧಿಕಾರಿ ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಮಹಾವೀರರ ಜಿನಬಿಂಬವನ್ನು ಸ್ವರ್ಣ ಪಲ್ಲಕ್ಕಿಯಲ್ಲಿ ಕ್ಷೇತ್ರಕ್ಕೆ ತರಲಾಯಿತು. ಈ ವೇಳೆ ‘ಅಹಿಂಸಾ ಪರಮೋ ಧರ್ಮಕೀ ಜೈ ಶ್ರೀ ಮಹಾವೀರ ಸ್ವಾಮಿ ಕೀ ಜೈ ಜೈನ ಧರ್ಮ ಕೀ ಜೈ’ ಎಂಬ ಘೋಷಣೆಗಳು ಮೊಳಗಿದವು.
ನಂತರ ಪಾರ್ಶ್ವನಾಥ ಸ್ವಾಮಿ, ಅಧಿದೇವತೆ ಯಕ್ಷಿ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಪೂಜೆ ಸಲ್ಲಿಸಲಾಯಿತು. ವರ್ಧಮಾನ ಮಹಾವೀರ ಸ್ವಾಮಿಯ ಜನ್ಮಾಭಿಷೇಕ, ನಾಮಕರಣ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.
ನಂತರ ನಡೆದ ಧರ್ಮ ಸಭೆಯಲ್ಲಿ ಶ್ರೀಗಳು ಮಾತನಾಡಿದರು. ಭಗವಾನ್ ಮಹಾವೀರರ ಜೀವನವು ನಮಗೆ ಸಹಬಾಳ್ವೆ, ಸಾಮರಸ್ಯ, ಅಹಿಂಸಾ ಭಾವ, ಪರಿಸರ ರಕ್ಷಣೆಯ ಪಾಠ ಕಲಿಸುತ್ತದೆ. ಯುದ್ಧ ತ್ಯಜಿಸಿ, ಪರಸ್ಪರ ಪ್ರೀತಿಸುವ ಮನೋಧರ್ಮ ಪ್ರತಿಯೊಬ್ಬರಲ್ಲೂ ನೆಲೆಸಲಿ. ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು.
ಶ್ರೀ ಪದ್ಮಾವತಿ ಮಹಿಳಾ ಸಂಘದ ಸದಸ್ಯೆಯರು, ಶ್ರೀ ಕುಂದಕುಂದ ವಿದ್ಯಾಪೀಠದ ಗುರುಕುಲದ ವಿದ್ಯಾರ್ಥಿಗಳು, ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ