ಶಿವಮೊಗ್ಗ ಲೈವ್.ಕಾಂ | RIPPONPETE NEWS | 14 ಜುಲೈ 2021
ಗದ್ದೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಜಿನಗೋಡು ಗ್ರಾಮದ ಕೊಲ್ಲಪ್ಪ (62) ಮೃತರು. ಶನಿವಾರ ಕೊಲ್ಲಪ್ಪ ಅವರು ಗದ್ದೆ ಕೆಲಸಕ್ಕೆ ತೆರಳಿದ್ದರು. ಆದರೆ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮನೆಯವರು ಸಂಬಂಧಿಕರು, ಸ್ನೇಹಿತರು, ಊರ ಮನೆಯಲ್ಲಿ ವಿಚಾರಿಸಿದ್ದರು.
ಮೂರು ದಿನದ ಬಳಿಕ ಶವ ಪತ್ತೆ
ಕಾಣೆಯಾಗಿ ಮೂರು ದಿನದ ಬಳಿಕ ಕೊಲ್ಲಪ್ಪ ಅವರ ಶವ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹ ಇರುವುದು ಗೊತ್ತಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದಾಗ ಅದು ಕೊಲ್ಲಪ್ಪ ಅವರ ಮೃತದೇಹ ಎಂದು ಗೊತ್ತಾಗಿದೆ.
ಆತ್ಮಹತ್ಯೆಯೋ? ಕೊಲೆಯೋ?
ಗದ್ದೆ ಕೆಲಸಕ್ಕೆ ಹೋದವರು ಶವವಾಗಿ ನದಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೊಲ್ಲಪ್ಪ ಅವರದ್ದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ನದಿಗೆ ಬಿದಿದ್ದಾರೋ ಅಥವಾ ಕೊಲೆ ಮಾಡಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಿಪ್ಪನ್ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200