ಗದ್ದೆ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ನಾಪತ್ತೆ, ಮೂರು ದಿನದ ಬಳಿಕ ಪೊಲೀಸರು ಕರೆ ಮಾಡಿದಾಗ ಕುಟುಂಬದವರಿಗೆ ಆಘಾತ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 14 ಜುಲೈ 2021

ಗದ್ದೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಇದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಜಿನಗೋಡು ಗ್ರಾಮದ ಕೊಲ್ಲಪ್ಪ (62) ಮೃತರು. ಶನಿವಾರ ಕೊಲ್ಲಪ್ಪ ಅವರು ಗದ್ದೆ ಕೆಲಸಕ್ಕೆ ತೆರಳಿದ್ದರು. ಆದರೆ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮನೆಯವರು ಸಂಬಂಧಿಕರು, ಸ್ನೇಹಿತರು, ಊರ ಮನೆಯಲ್ಲಿ ವಿಚಾರಿಸಿದ್ದರು.

ಮೂರು ದಿನದ ಬಳಿಕ ಶವ ಪತ್ತೆ

Kalleshwara-Enterprises.webp

ಕಾಣೆಯಾಗಿ ಮೂರು ದಿನದ ಬಳಿಕ ಕೊಲ್ಲಪ್ಪ ಅವರ ಶವ ಕುಮದ್ವತಿ ನದಿಯಲ್ಲಿ ಪತ್ತೆಯಾಗಿದೆ. ಮೃತದೇಹ ಇರುವುದು ಗೊತ್ತಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದಾಗ ಅದು ಕೊಲ್ಲಪ್ಪ ಅವರ ಮೃತದೇಹ ಎಂದು ಗೊತ್ತಾಗಿದೆ.

ಆತ್ಮಹತ್ಯೆಯೋ? ಕೊಲೆಯೋ?

ಗದ್ದೆ ಕೆಲಸಕ್ಕೆ ಹೋದವರು ಶವವಾಗಿ ನದಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೊಲ್ಲಪ್ಪ ಅವರದ್ದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ನದಿಗೆ ಬಿದಿದ್ದಾರೋ ಅಥವಾ ಕೊಲೆ ಮಾಡಲಾಗಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಿಪ್ಪನ್‍ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment