ತಲೆ ಛಿದ್ರವಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ, ಪಕ್ಕದಲ್ಲಿ ಬಂದೂಕು ಪತ್ತೆ, ಸ್ಥಳಕ್ಕೆ ಪೊಲೀಸರು ದೌಡು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ಭಟ್ (85) ಸಾವನ್ನಪ್ಪಿದ ದುರ್ದೈವಿ. ಭಾನುವಾರ ಮಧ್ಯರಾತ್ರಿ ಸಿಂಗಲ್ ಬ್ಯಾರಲ್ ಗನ್‌ನಿಂದ ತಾವೇ ಶೂಟ್ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ರಾಮಚಂದ್ರ ಭಟ್‌ ಅವರ ತಲೆ ಛಿದ್ರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

200123 Police Jeep With Light jpg

ರಾಮಚಂದ್ರ ಭಟ್ ಅವರು ಬಳಸಿದ ಸಿಂಗಲ್ ಬ್ಯಾರಲ್ ಗನ್‌ಗೆ ಲೈಸೆನ್ಸ್ ಇತ್ತೇ ಹಾಗೂ ವಯೋಸಹಜ ಅಶಕ್ತತೆಯ ನಡುವೆಯೂ ಅವರು ಗನ್‌ನ ಟ್ರಿಗರ್ ಪ್ರೆಸ್ ಮಾಡಿದ್ದು ಹೇಗೆ ಎಂಬುದನ್ನು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ಸೋಕೋ ತಂಡ ಭೇಟಿ ನೀಡಲಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.