ರಿಪ್ಪನ್‌ಪೇಟೆ: ಸಮೀಪದ ಕೆಂಚನಾಲ ಗ್ರಾಮದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ವರ್ಷದಲ್ಲಿ ಎರಡು ಬಾರಿ ಜಾತ್ರೆ ನಡೆಯುವುದು ಇಲ್ಲಿನ ವಿಶೇಷ. ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಭಕ್ತರು ಬಂದು ಹರಕೆ, ಪೂಜೆ ಸಲ್ಲಿಸುವುದು ವಾಡಿಕೆ. ಆಗಸ್ಟ್ 11ರ ಬೆಳಿಗ್ಗೆ 6ಕ್ಕೆ ದೇವಿ ಸನ್ನಿಧಿಯಲ್ಲಿ ವಿಶೇಷ ಅಲಂಕಾರ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸುವಂತೆ ಜಾತ್ರಾ ಮಹೋತ್ಸವ ಸಮಿತಿ ಹಾಗೂ ದೇವಸ್ಥಾನ ಸೇವಾ ಸಮಿತಿ ಮನವಿ ಮಾಡಿದೆ.

ಇದನ್ನೂ ಓದಿ:➤ ದಿಢೀರ್ ತೆರೆದುಕೊಳ್ತು ಮಿನಿ ಬಸ್ ಡೋರ್, ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ, ಎಲ್ಲಿ? ಆಗಿದ್ದೇನು?