ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 31 MAY 2023
RIPPONPETE : ಇಲ್ಲಿನ ನಾಡ ಕಚೇರಿಗೆ (Nada Kacheri) ಶಾಸಕ ಬೇಳೂರು ಗೋಪಾಲಕೃಷ್ಣ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳ ಕಾರ್ಯ ಚಟುವಟಿಕೆ ಗಮನಿಸಿದರು. ಸಾರ್ವಜನಿಕರ ಅಹವಾಲು ಆಲಿಸಿದರು.

ಈ ವೇಳೆ ಉಪ ತಹಶೀಲ್ದಾರ್ ಹುಚ್ಚರಾಯಪ್ಪ ಅವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಲವು ಸೂಚನೆ ನೀಡಿದರು.

ನಾಡ ಕಚೇರಿಗೆ (Nada Kacheri) ಸೂಕ್ತ ಕಟ್ಟಡವಿಲ್ಲ. ಮುಂದೆ ಸೂಕ್ತ ಸ್ಥಳ ಗುರುತಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಇನ್ನು, ಕೆಲವು ಅಧಿಕಾರಿಗಳ ಕುರಿತು ಸಾರ್ವಜನಿಕರಿಂದ ದೂರುಗಳಿವೆ. ಅವುಗಳ ಕುರಿತು ಗಮನ ಹರಿಸುವಂತೆ ಉಪ ತಹಶೀಲ್ದಾರ್‌ಗೆ ಸೂಚನೆ ನೀಡಿದರು.
ಇದನ್ನೂ ಓದಿ – ಜನ ಶತಾಬ್ದಿ ರೈಲು 3 ಗಂಟೆ ಲೇಟ್, ರಾತ್ರಿ ಬದಲು ಮಧ್ಯರಾತ್ರಿ ಶಿವಮೊಗ್ಗ ತಲುಪಿದ ಟ್ರೈನ್, ಪ್ರಯಾಣಿಕರು ಹೈರಾಣು
ಗ್ರಾಮ ಪಂಚಾಯಿತ ಸದಸ್ಯ ಗವಟೂರು ಗಣಪತಿ, ಆಸೀಫ್, ಮಧುಸೂದನ್, ಉಮಾಕರ, ಉಮೇಶ್ ಗೌಡ, ಶ್ರೀಧರ, ನಾಗರಾಜ್, ವಿನಾಯಕ ಶೆಟ್ಟಿ, ರಾಜುಗೌಡ ಪಾಟೀಲ್ ಸೇರಿದಂತೆ ಹಲವರು ಇದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





