ಭಾರಿ ಮಳೆಗೆ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿತ, ವಾಹನ ಸಂಚಾರ ಸ್ಥಗಿತ, ಪರ್ಯಾಯ ಮಾರ್ಗ ಯಾವುದು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | HOSANAGARA NEWS | 19 JUNE 2021 ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಮುಂಗಾರು ಮಳೆ ಅಬ್ಬರಕ್ಕೆ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿತ ಉಂಟಾಗಿದೆ.

ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನಾಗೋಡಿ ಘಾಟಿಯಲ್ಲಿ ರಸ್ತೆ ಕುಸಿದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿವಕುಮಾರ್ ಆದೇಶಿಸಿದ್ದಾರೆ.

ಆಗಸ್ಟ್ 30 ಅಥವಾ ರಿಪೇರಿ ಕಾರ್ಯ ಮುಗಿಯುವವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಪರ್ಯಾಯವಾಗಿ ರಾಣೆಬೆನ್ನೂರು – ಹೊಸನಗರ – ಮಾಸ್ತಿಕಟ್ಟೆ – ಸಿದ್ದಾಪುರ ಮಾರ್ಗದಲ್ಲಿ ವಾಹನ ಸಂಚರಿಸಲು ಸೂಚಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment