ಹೊಸನಗರದ ಶಿಕ್ಷಕಿಗೆ ರಾಷ್ಟ್ರಪ್ರಶಸ್ತಿ, ಯಾರದು? ಮಿನಿಸ್ಟರ್‌ ಏನಂದ್ರು?

ಶಿವಮೊಗ್ಗ ಲೈವ್.ಕಾಂ | ಹೊಸನಗರ

ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಿದೆ. ದೇಶಾದ್ಯಂತ ಒಟ್ಟು 48 ಮಂದಿ ಅತ್ಯುತ್ತಮ ಶಿಕ್ಷಕರು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

National-Award-for-Hosanagara-Teacher-Rathnakumari

ರತ್ನಕುಮಾರಿ ಅವರು ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಸೆಪ್ಟೆಂಬರ್ 5 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿ ಅವರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಗ್ರಾಮೀಣ ಭಾಗದ ಮಕ್ಕಳಲ್ಲಿ ಅಕ್ಷರ ದೀವಿಗೆ ಬೆಳಗುತ್ತಿರುವ ರತ್ನಕುಮಾರಿ ಅವರಿಗೆ ಅಭಿನಂದನೆಗಳು. ನಮ್ಮ ಇಲಾಖೆ, ರಾಜ್ಯ ಮತ್ತು ನಮ್ಮ ಜಿಲ್ಲೆ ಹೆಮ್ಮೆಪಡುವಂತೆ ಮಾಡಿದ್ದಾರೆ. ನಿಮ್ಮ ಕೆಲಸ ರಾಜ್ಯದ ಶಿಕ್ಷಕ ಸಮುದಾಯಕ್ಕೆಲ್ಲಾ ಮಾದರಿ. ನಿಮ್ಮ ಪವಿತ್ರವಾದ ಈ ಶೈಕ್ಷಣಿಕ ಕಾಯಕ ಹೀಗೆಯೇ ಮುಂದುವರೆಯಲಿ.

ಮಧು ಬಂಗಾರಪ್ಪ, ಶಿಕ್ಷಣ ಸಚಿವ