ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 MAY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOSANAGARA : ಬಿಎಸ್‌ಎನ್‌ಎಲ್ ಮೊಬೈಲ್ ನೆಟ್‌ವರ್ಕ್ (NETWORK) ಸಮಸ್ಯೆ ಖಂಡಿಸಿ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದರು. ಹೊಸನಗರ ತಾಲೂಕು ಮತ್ತಿಮನೆ ಗ್ರಾಮ ಪಂಚಾಯಿತಿ ಹಿಂಭಾಗದಲ್ಲಿರುವ ಬಿಎಸ್‌ಎನ್‌ಎಲ್ ಟವರ್ ಏರಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವೇನು?
ಮತ್ತಿಮನೆ, ನಗರ, ಸಂಪೇಕಟ್ಟೆ, ನಿಟ್ಟೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸರಿಯಾಗಿ ಲಭಿಸುತ್ತಿಲ್ಲ. ಕರೆಂಟ್ ಹೋದರೆ ನೆಟ್‌ವರ್ಕ್ ಕೂಡ ಹೋಗಲಿದೆ. ವಿದ್ಯುತ್ ಜನರೇಟರ್ ಹಾಳಾಗಿದ್ದರು ಸರಿಪಡಿಸಿಲ್ಲ. ಖಾಸಗಿ ಸಂಸ್ಥೆಗೆ ನೆಟ್‌ವರ್ಕ್ ನಿರ್ವಹಣೆಗೆ ನೀಡಲಾಗಿದೆ. ಸಂಸ್ಥೆಯವರು ಟವರ್ ಬಳಿ ಬರುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳ ಜೊತೆ ಮಾತಿನ ಚಕಮಕಿ
ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸುತ್ತಿರುವ ವಿಚಾರ ತಿಳಿದು ಬಿಎಸ್‌ಎನ್‌ಎಲ್ ಜೆಟಿಒ ಹರೀಶ್, ಸಂತೋಷ್, ಶರತ್, ನಗರ ಠಾಣೆ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು ಮತ್ತು ಅಧಿಕಾರಿಗಳ ಜೊತೆಗೆ ಮಾತಿನ ಚಕಮಕಿ ನಡೆಯಿತು. 24 ಗಂಟೆ ನಿರಂತರ ನೆಟ್‌ವರ್ಕ್ ಸಿಗಬೇಕು. ವಿದ್ಯುತ್ ಇಲ್ಲದಿದ್ದರು ಜನರೇಟರ್ ಮೂಲಕ ನೆಟ್‌ವರ್ಕ್ ಇರುವಂತೆ ನೋಡಿಕೊಳ್ಳಬೇಕು ಎಂದು ಪಟ್ಟು ಹಿಡಿದರು. ಅಧಿಕಾರಿಗಳು 6 ದಿನದ ಕಾಲವಕಾಶ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು. ಹಾಗಾಗಿ ಗ್ರಾಮಸ್ಥರು ಟವರ್‌ನಿಂದ ಕೆಳಗಿಳಿದರು. ಅಧಿಕಾರಿಗಳು ಮಾತು ತಪ್ಪಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಇದನ್ನೂ ಓದಿ – ತ್ಯಾವರೆಕೊಪ್ಪ ಹುಲಿ, ಸಿಂಹಧಾಮ, ಪ್ರವಾಸಿಗರಿಗೆ ಗುಡ್ ನ್ಯೂಸ್
ಸಂಪೇಕಟ್ಟೆಯ ಮೋಹನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕುಮಾರ್ ಹಿಲ್ಕುಂಜಿ, ಅಡಗೋಡಿ ಸ್ವಾಮಿ, ತರುವ ಕೃಷ್ಣ, ಅರಮನೆಕೊಪ್ಪ ಗೋಪಾಲ್, ಕೊಡಸೆ ಚಂದ್ರಪ್ಪ, ಅಪ್ಪು ಭಟ್, ಕಿಶೋರ್, ಸುಕೇಶ್, ಟಿ.ಡಿ.ಗಣಪತಿ, ರವೀಂದ್ರ ಮತ್ತಿಮನೆ, ಪ್ರಶಾಂತ್ ಸಂಪೇಕಟ್ಟೆ, ವೆಂಕಟರಮಣ ಭಟ್, ಶ್ರೀನಿವಾಶಸ್, ಆದಿತ್ಯ ಸೇರಿದಂತೆ ಹಲವರು ಇದ್ದರು.