ಪಿಂಚಣಿಗಾಗಿ ಕಾದು ಕಾದು ಕಚೇರಿ ಮುಂದೆಯೇ ಕುಸಿದು ಬಿದ್ದ ವೃದ್ಧೆ

Published On : ಜೂನ್ 20, 2022

Published By : ನಿತಿನ್‌ ಆರ್‌.ಕೈದೊಟ್ಲು 

SHIVAMOGGA LIVE NEWS | HOSANAGARA| 20 ಜೂನ್ 2022

ಗ್ರಾಮ ಲೆಕ್ಕಿಗರ ಕಚೇರಿ ಮುಂದೆ ಗಂಟೆಗಟ್ಟಲೆ ಕಾದು ಸುಸ್ತಾದ ವೃದ್ದೆಯೊಬ್ಬರು ಕಚೇರಿ ಮುಂಭಾಗ ಕುಸಿದು ಬಿದ್ದಿದ್ದಾರೆ. ಕೂಡಲೆ ವೃದ್ಧೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು.

Shimoga Nanjappa Hospital

ಹೊಸನಗರ ತಾಲೂಕು ನಿಟ್ಟೂರು ಗ್ರಾಮ ಲೆಕ್ಕಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಘಟನೆ ಸಂಭವಿಸಿದೆ. ವೃದ್ಧೆ ಸಾಧಮ್ಮ ಅವರು ಹೆಬ್ಬಿಗೆ ಗ್ರಾಮದಿಂದ 7 ಕಿ.ಮೀ ನಡೆದುಕೊಂಡು ನಿಟ್ಟೂರಿಗೆ ಬಂದಿದ್ದರು.

ಕುಸಿದು ಬಿದ್ದ ವೃದ್ಧೆ

ಶುಕ್ರವಾರ ಬೆಳಗ್ಗೆ 9.30ಕ್ಕೆ ವೃದ್ಧೆ ಸಾಧಮ್ಮ ಅವರು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದರು. ಮಧ್ಯಾಹ್ನವಾದರೂ ಗ್ರಾಮ ಲೆಕ್ಕಿಗ ಮಂಜಪ್ಪ ಅವರು ಕಚೇರಿಗೆ ಆಗಮಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಕಾದು ಕಾದು ಸುಸ್ತಾಗಿದ್ದ ವೃದ್ಧೆ ಸಾಧಮ್ಮ ಅವರು ಸುಸ್ತಾಗಿ ಕುಸಿದು ಬಿದ್ದಿದ್ದಾರೆ.

ಸ್ಥಳೀಯರು ಸಾಧಮ್ಮ ಅವರನ್ನು ಉಪಚರಿಸಿದರು. ಅವರ ಪರಿಸ್ಥಿತಿ ಕಂಡು ಸ್ಥಳೀಯರು ಮರುಕ ವ್ಯಕ್ತಪಡಿಸಿದರು. ಅಲ್ಲದೆ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆಕ್ರೋಶಗೊಂಡರು.

ಪಿಂಚಣಿಗಾಗಿ ಬಂದಿದ್ದರು

ಸಾಮಾಜಿಕ ಭದ್ರತಾ ಪಿಂಚಣಿ ಸೌಲಭ್ಯ ಪಡೆಯಲು ಸಾಧಮ್ಮ ಅವರು ನಿಟ್ಟೂರಿಗೆ ಆಗಮಿಸಿದ್ದರು. 7 ಕಿ.ಮೀ ನಡೆದುಕೊಂಡು ಬಂದಿದ್ದ ಅವರು, ಬಹು ಹೊತ್ತು ಕಾದು, ಸುಸ್ತಾಗಿ ಬಿದ್ದಿದ್ದಾರೆ. ಕೂಡಲೆ ಅವರನ್ನು ನಿಟ್ಟೂರಿನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು.

ಘಟನೆ ಬೆನ್ನಿಗೆ ತಹಶೀಲ್ದಾರ್ ವಿ.ಎಸ್.ರಾಜೀವ್ ಅವರು ಗ್ರಾಮ ಲೆಕ್ಕಿಗ ಮಂಜಪ್ಪ ಅವರನ್ನು ಬೇರೆಡೆ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ, ಸಾವು

ಇದನ್ನೂ ಓದಿ – ‘ಕುಜ ದೋಷ’ ತಂದ ಆಪತ್ತು, ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

whatsapp Group Scan whatsapp-smg-live

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜೂನ್ 20, 2022

Leave a Comment