ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOSANAGARA : ಮಕ್ಕಳಿಗೆ ಸಮರ್ಪಕವಾಗಿ ತರಗತಿ ನಡೆಯುತ್ತಿಲ್ಲ ಎಂದು ಆರೋಪಿಸಿ ಪೋಷಕರು ಶಾಲೆಗೆ (School) ಬೀಗ ಹಾಕಿ ಪ್ರತಿಭಟನೆ (Protest) ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೊಸನಗರದ ತಮ್ಮಡಿಕೊಪ್ಪ (Tammadikoppa) ಗ್ರಾಮದಲ್ಲಿ ಶಾಲೆ ಮುಂದೆ ಪೋಷಕರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಲ್ಲಿನ ಸರ್ಕಾರಿ ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯ ಶಿಕ್ಷಕರು ಮನಸೋಯಿಚ್ಛೆ ಶಾಲೆ ಬರುತ್ತಿದ್ದಾರೆ. ಪ್ರತಿ ವಿಷಯಕ್ಕೆ ಒಬ್ಬರು ಶಿಕ್ಷಕರು ಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನೂ ಓದಿ – ನಾಡ ಕಚೇರಿಗೆ MLA ದಿಢೀರ್ ಭೇಟಿ, ಅಧಿಕಾರಿಗಳಿಗೆ ಫುಲ್ ಕ್ಲಾಸ್
ಶಾಲೆಗೆ (School) ಬೀಗ ಹಾಕಿ ಕಟ್ಟಡದ ಮುಂದೆ ಪ್ರತಿಭಟನೆ ನಡೆಸಲಾಯಿತು. ಮಕ್ಕಳು ಕೂಡ ಶಾಲೆಯಿಂದ ಹೊರಗೆ ಕುಳಿತಿದ್ದರು. ಸಮಸ್ಯೆ ಕುರಿತು ಹಲವು ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಹಾಗಿದ್ದೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.