ಶಿವಮೊಗ್ಗ ಲೈವ್.ಕಾಂ | HOSANAGARA NEWS | 10 ಸೆಪ್ಟಂಬರ್ 2020
ಹೆದ್ದಾರಿ ಪಕ್ಕದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಬೀದಿ ಹೊಟೇಲ್ ತೆರವುಗೊಳಿಸುವಂತೆ ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ ರಾಜೀವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹೊಸನಗರ ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಬಲ ಭಾಗದಲ್ಲಿ ಬೀದಿ ಅಂಗಡಿ ಮತ್ತು ಕ್ಯಾಂಟೀನ್ ತೆರೆಯಲು ಪಟ್ಟಣ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಆದರೆ ಎಡ ಭಾಗದಲ್ಲಿ ಶೆಡ್ ನಿರ್ಮಿಸಲಾಗಿದ್ದು, ಬೀದಿ ಅಂಗಡಿ ಹೆಸರಲ್ಲಿ ಹೊಟೇಲ್ ತೆರೆಯಲಾಗುತ್ತಿದೆ. ಅನುಮತಿ ಇಲ್ಲದೆ ಇದನ್ನು ನಿರ್ಮಿಸಲಾಗಿತ್ತಿದೆ ಎಂದು ಪಟ್ಟಣ ಪಂಚಾಯತಿ ಸದಸ್ಯರು ಆರೋಪಿಸಿದರು.
ರಾಷ್ಟ್ರೀಯ ಹೆದ್ದಾರಿಯ ಎಡ ಭಾಗದಲ್ಲಿ ಸರ್ಕಾರಿ ಕ್ವಾರ್ಟರ್ಸ್ ಇದೆ. ಪಕ್ಕದಲ್ಲೇ ಸರ್ಕಾರಿ ಬಾವಿ ಇದೆ. ಇಲ್ಲಿ ಒಳ ಚರಂಡಿ ವ್ಯವಸ್ಥೆ ಇಲ್ಲ. ಹೊಟೇಲ್ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ಹಾಗಾಗಿ ಕೂಡಲೆ ಇದನ್ನು ತೆರವು ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಹಾಲಗದ್ದೆ ಉಮೇಶ್, ಅಶ್ವಿನಿ ಕುಮಾರ್, ಸಿಂಥಿಯಾ ಶೆರಾವ್, ಶಾಹಿನಾ ನಾಸಿರ್, ಚಂದ್ರಕಲಾ, ನಾಗರಾಜ್, ಕೃಷ್ಣವೇಣಿ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]