ಹೊಸನಗರ : ಜಿಲ್ಲೆಯ 5 ಕಡೆ ಡಿಸಿಸಿ ಬ್ಯಾಂಕ್ ನೂತನ ಶಾಖೆ (Branch) ತೆರೆಯಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಶೀಘ್ರದಲ್ಲಿ ನೂತನ ಶಾಖೆಗಳನ್ನು ಆರಂಭಿಸಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.
ನಗರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಆರ್.ಎಂ.ಮಂಜುನಾಥ ಗೌಡ, ಈ ಹಿಂದೆ ಜಿಲ್ಲೆಯ ಮೂರು ಕಡೆ ಚಾಲನೆ ನೀಡಲಾಗಿದೆ. ಇದೀಗ ಹೊಸನಗರ ತಾಲ್ಲೂಕಿನ ಚಿಕ್ಕಪೇಟೆ ನಗರ, ತೀರ್ಥಹಳ್ಳಿಯ ಎಪಿಎಂಸಿ, ಸಾಗರದ ತ್ಯಾಗರ್ತಿ, ಶಿವಮೊಗ್ಗದ ಗಾಜನೂರು, ಭದ್ರಾವತಿಯ ಬಾರಂದೂರಿನಲ್ಲಿ ಶಾಖೆ (Branch) ತೆರೆಯಲು ಅನುಮತಿ ಸಿಕ್ಕಿದೆ ಎಂದರು.
![]() |
ಈ ವರ್ಷ 8 ಶಾಖೆಗಳನ್ನು ತೆರೆಯುತ್ತಿರುವುದು ಒಂದು ಇತಿಹಾಸ. ಜಿಲ್ಲೆಯಲ್ಲಿ ಒಟ್ಟು 14 ಶಾಖೆಗಳನ್ನು ತೆರೆಯಲು ಅನುಮತಿಗಾಗಿ ರಿಸರ್ವ್ ಬ್ಯಾಂಕ್‌ಗೆ ಮನವಿ ಸಲ್ಲಿಕೆಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕಿನ 50 ಶಾಖೆಗಳನ್ನು ತೆರೆಯುವ ಉದ್ದೇಶವಿದೆ.
– ಆರ್.ಎಂ.ಮಂಜುನಾಥ ಗೌಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ

ರೈತರು ಮತ್ತು ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಚೈತನ್ಯ ನೀಡುವ ಸಲುವಾಗಿ ಹಳ್ಳಿ ಹಳ್ಳಿಗಳಲ್ಲಿ ಶಾಖೆಗಳನ್ನು ಆರಂಭಿಸುವ ಅಗತ್ಯವಿದೆ. ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆ ಅಡಿ ಡಿಸಿಸಿ ಬ್ಯಾಂಕ್ ಶಾಖೆಗಳು ಕಾರ್ಯನಿರ್ವಹಿಸಲಿದ್ದು, ಫೋನ್ ಪೇ ಸೌಲಭ್ಯ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್ ರೀತಿಯಲ್ಲೇ ಕಾರ್ಯ ನಿರ್ವಹಿಸಲಿದೆ ಎಂದು ಅವರು ವಿವರಿಸಿದರು.
ಶಿಮುಲ್ ಅಧ್ಯಕ್ಷ ವಿದ್ಯಾಧರ, ಸೊಸೈಟಿ ಅಧ್ಯಕ್ಷ ಅಂಬರೀಶ್, ಉಪಾಧ್ಯಕ್ಷ ಗೋಪಾಲ ಶೆಟ್ಟಿ, ಪ್ರಮುಖರಾದ ಮಾಸ್ತಿಕಟ್ಟೆ ಸುಬ್ರಮಣ್ಯ, ಕರುಣಾಕರ ಶೆಟ್ಟಿ, ಲೀಲಕೃಷ್ಣ ಮಕ್ಕೀಮನೆ, ದೇವಗಂಗೆ ಚಂದ್ರಶೇಖರ್ ಶೆಟ್ಟಿ, ವಿನಾಯಕ ಚಕ್ಕಾರು, ಸಿಇಒ ವಿಷ್ಣುವರ್ಧನ ಸೇರಿ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗ ಈದ್ಗಾ ಮೈದಾನಕ್ಕೆ ಬೇಲಿ ವಿವಾದ, ಬೀದಿಗಿಳಿದ ಮುಸ್ಲಿಂ ಸಮುದಾಯ, ಇಡೀ ದಿನ ಏನೇನಾಯ್ತು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200