ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 JANUARY 2023
ರಾಮನಗರ : ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ (photographer) ಪ್ರಸನ್ನ ಭಟ್ (26) ನಿಧನರಾಗಿದ್ದಾರೆ. ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಮಾವತ್ತೂರು ಕೆರೆಯಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಪ್ರಸನ್ನ ಭಟ್ ಸೇರಿ ಆರು ಮಂದಿ ಕಾರಿನಲ್ಲಿ ಕೆರೆ ಬಳಿ ಬಂದಿದ್ದರು. ಮಾವತ್ತೂರು ಕೆರೆಯಲ್ಲಿ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.
ಇನ್ ಸ್ಟಾಗ್ರಾಂನಲ್ಲಿ ಕೆರೆ ವೈಭವ
ಶಿವಮೊಗ್ಗ ಜಿಲ್ಲೆ ಹೊಸನಗರದ ಪ್ರಸನ್ನ ಭಟ್ ಅವರು ಇನ್ ಸ್ಟಾಗ್ರಾಂನಲ್ಲಿ ಮಾವತ್ತೂರು ಕೆರೆಯ ವಿಡಿಯೋ ನೋಡಿದ್ದರು. ಹಾಗಾಗಿ ಅಲ್ಲಿಗೆ ತೆರಳಿದ್ದರು ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ಪ್ರಸನ್ನ ಭಟ್ ಅವರಿಗಾಗಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ರಾತ್ರಿ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ದಯಾನಂದ ಸಾಗರ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ.
ಸಂಸದರ ಅಚ್ಚುಮೆಚ್ಚಿನ ಫೋಟೊಗ್ರಾಫರ್
ಪ್ರಸನ್ನ ಭಟ್ ಹೊಸನಗರ ತಾಲೂಕಿನವರು. ವಿದ್ಯಾರ್ಥಿ ದೆಸೆಯಿಂದಲೆ ಪತ್ರಿಕೋದ್ಯಮದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದರು. ವಿಶ್ವವಾಣಿ ಪತ್ರಿಕೆಯ ಹೊಸನಗರ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. ಆ ಬಳಿಕ ಸಂವಾದ ಡಿಜಿಟಲ್ ಮಾದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ – ಸಂಭ್ರಮವಿದ್ದ ಮನೆಯಲ್ಲಿ ಸಂಭವಿಸಿತು ದುರ್ಘಟನೆ, ಆಗಿದ್ದೇನು? ಇಬ್ಬರ ಸಾವಿಗೆ ಕಾರಣವೇನು?
ಫೋಟೋಗ್ರಫಿ, ವಿಡಿಯೋಗ್ರಫಿಯಲ್ಲಿ ನಿಪುಣರಾಗಿದ್ದರು. ಕೆಲ ವರ್ಷದಿಂದ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊ ಗ್ರಾಫರ್ (photographer) ಆಗಿ ಕಾರ್ಯ ನಿರ್ಹಿಸುತ್ತಿದ್ದರು. ಸಂಸದ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣಗಳು, ಮೀಡಿಯಾ ವಿಭಾಗವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಇದೆ ಕಾರಣಕ್ಕೆ ಅವರು ಸಂಸದ ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಗೆ ಆಪ್ತರಾಗಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422