ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸಿದ್ದ ತಾಯಿಗೆ ಪೊಲೀಸರಿಂದ ವಾರ್ನಿಂಗ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 NOVEMBER 2023

RIPPONPETE : ಪಟ್ಟಣದ ಶಿವಮೊಗ್ಗ ರಸ್ತೆಯ ನಂದಿ ಆಸ್ಪತ್ರೆ ಎದುರು ಅಪ್ರಾಪ್ತ ವಯಸ್ಸಿನ ತನ್ನ ಮಕ್ಕಳಿಗೆ (children) ಭಿಕ್ಷಾಟನೆ ಮಾಡುವಂತೆ ಒತ್ತಾಯಿಸುತ್ತಿದ್ದ ಮಹಿಳೆಗೆ ಪಟ್ಟಣ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಬುದ್ದಿ ಹೇಳಿ ಕಳುಹಿಸಿದ್ದಾರೆ.

ಮಹಿಳೆಯೊಬ್ಬರು ಮಕ್ಕಳ ಕೈಗೆ ತಟ್ಟೆ ಕೊಟ್ಟು ಬಲವಂತವಾಗಿ ಭಿಕ್ಷೆ ಬೇಡುವಂತೆ ಅಣಿಗೊಳಿಸುತ್ತಿದ್ದಳು. ಇದನ್ನು ಗಮನಿಸಿದ ಸಾಮಾಜಿಕ ಹೋರಾಟಗಾರ ಟಿ.ಆ‌ರ್. ಕೃಷ್ಣಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- WHATSAPP ಬಳಕೆದಾರರಿಗೆ ಸುಪ್ರೀಂ ಕೋರ್ಟ್‌ ಮಹತ್ವದ ಮೂರು ಸೂಚನೆ, ಏನದು?

ನಂತರ ಮಹಿಳೆಯನ್ನು ಠಾಣೆಗೆ ಕರೆಸಿದ ಪಿಎಸ್‌ಐ ಪ್ರವೀಣ್ ಕುಮಾರ್, ಆ ಮಹಿಳೆಗೆ ಭಿಕ್ಷಾಟನೆ ಮಾಡುವುದು ಅಪರಾಧ. ಮಕ್ಕಳನ್ನು (children) ಭಿಕ್ಷೆಗೆ ಕಳುಹಿಸಬಾರದು. ಮಕ್ಕಳನ್ನು ಶಾಲೆಗೆ ಸೇರಿಸಿ. ಇನ್ನು ಮುಂದೆ ಮಕ್ಕಳನ್ನು ಭಿಕ್ಷಾಟನೆಗೆ ಕಳಿಸಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ ಕಳುಹಿಸಿದರು.

ಈ ಸಂದರ್ಭ ಸಾಮಾಜಿಕ ಹೋರಾಟಗಾರ ಟಿ.ಆ‌ರ್.ಕೃಷ್ಣಪ್ಪ, ಪರಶುರಾಮ್, ಶ್ರೀಧರ್, ಧರ್ಮರಾಜ್ ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment