ಹೊಸನಗರದಲ್ಲಿ ಸಚಿವರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಸಭೆ, ಯಾವಾಗ? ಎಲ್ಲಿ?

ಶಿವಮೊಗ್ಗ: ಸಚಿವ ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21 ರಂದು ಬೆಳಿಗ್ಗೆ 9.30ಕ್ಕೆ ಹೊಸನಗರದ ಈಡಿಗರ ಭವನದಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಾಶ್ ಜಿ.ಟಿ. ನಿಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಹೊಸನಗರ ತಾಲೂಕಿನ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಭೆಯಲ್ಲಿ ಸಲ್ಲಿಸಬಹುದು. ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಸಾರ್ವಜನಿಕರು ಈ ಆಂದೋಲನದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Minister-Madhu-Bangarappa-Speaks-to-Media-in-Shivamogga