ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
ಹೊಸನಗರ: ನಿಟ್ಟೂರು ಸಮೀಪದ ಗುರಟೆ ಗ್ರಾಮದ ಬಳಿ ಖಾಸಗಿ ಬಸ್ (Private Bus) ಮತ್ತು ಲಾರಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಹೊಸನಗರ ಕಡೆಯಿಂದ ಕಬ್ಬಿಣ ತುಂಬಿಕೊಂಡು ತೆರಳುತ್ತಿದ್ದ ಲಾರಿ ಮಧ್ಯೆ ಡಿಕ್ಕಿಯಾಗಿವೆ. ಘಟನೆಯಲ್ಲಿ ಚಾಲಕ ರಮೇಶ್ ಹಳೂರಿ ಮತ್ತು ಚಾಲಕನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ದಂಪತಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಇದನ್ನೂ ಓದಿ » ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗಿನ ಜಾವ ಮನೆಗೆ ನಡೆದು ಹೋಗುವಾಗ ಅಡ್ಡಗಟ್ಟಿದ ಬೈಕ್ ಸವಾರ
Private Bus


