ಶಿವಮೊಗ್ಗ ಲೈವ್.ಕಾಂ | HOSANAGARA NEWS | 27 ಜೂನ್ 2020
ಲಾಕ್ ಡೌನ್ ತೆರವಾಗುತ್ತಿದ್ದಂತೆ ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ಕ್ಷೇತ್ರ ಕೊಡಚಾದ್ರಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಪ್ರವಾಸಿಗರು ಬರುತ್ತಿದ್ದಾರೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದೇ ಕಾರಣಕ್ಕೆ ಹೊಸನಗರದ ಕಟ್ಟಿನಹೊಳೆ, ಹೊಸೂರು, ಸಂಪಕಟ್ಟೆ ಗ್ರಾಮಸ್ಥರು ಕೊಡಚಾದ್ರಿ ಗಿರಿಯ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು. ದೇಶಾದ್ಯಂತ ಕರೋನಾ ಆತಂಕ ಹೆಚ್ಚಾಗುತ್ತಿದೆ. ಹೀಗಿದ್ದೂ ವಿವಿಧೆಡೆಯಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಕೊಡಚಾದ್ರಿಯ ಹೋಂ ಸ್ಟೇಟಗಳಲ್ಲಿ ಉಳಿದುಕೊಳ್ಳುತ್ತಿದ್ದಾರೆ.
ಪ್ರವಾಸಿಗರು ಹೆಚ್ಚಾಗುತ್ತಿರುವುದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಕರೋನ ಆತಂಕವು ಹೆಚ್ಚುತ್ತಿದೆ. ಆದ್ದರಿಂದ ಕೊಡಚಾದ್ರಿ ಗಿರಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಬೇಕು. ಅಲ್ಲದೆ ಇಲ್ಲಿನ ಹೋಂ ಸ್ಟೇಗಳಲ್ಲಿ ಪ್ರವಾಸಿಗರು ತಂಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿ, ಗೇಟ್ ಮುಂದೆ ಧರಣಿ ನಡೆಸಿದರು.
ಬಳಿಕ ವನ್ಯಜೀವಿ ವಿಭಾಗದ ರೇಂಜರ್ ರಾಘವೇಂದ್ರ ಜಿ.ನಾಯ್ಕ್, ಗ್ರಾಮ ಪಂಚಾಯಿತಿ ಪಿಡಿಓಗೆ ಮನವಿ ಸಲ್ಲಿಸಿದರು.
Picture Credit : Ashwath Narayan
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]