ಶಿವಮೊಗ್ಗ ಲೈವ್.ಕಾಂ | SHIMOGA | 04 ಡಿಸೆಂಬರ್ 2019
ಹಕ್ಕುಪತ್ರ ನೀಡಲು ತಾರತಮ್ಯ ಮಾಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಕಟ್ಟಡದ ಮೇಲೆ ಹತ್ತಿ ಕುಳಿತು ಪ್ರತಿಭಟಿಸುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರದ ಮೂಡುಗೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ವಿಭಿನ್ನ ಪ್ರತಿಭಟನೆ ನಡೆಸುತ್ತಿದ್ದಾರೆ. ಇವತ್ತು ಬೆಳಗ್ಗೆ ವಲಯ ಅರಣ್ಯಾಧಿಕಾರಿ ಕಚೇರಿ ಮೇಲೆ ಹತ್ತಿ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಇವರನ್ನು ಕೆಳಗಿಳಿಸಲು ಅರಣ್ಯಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ.
ಪ್ರತಿಭಟನೆಗೆ ಕಾರಣವೇನು?
ಬಡವರು ಮತ್ತು ದಲಿತರ ವಾಸದ ಮನೆಗಳಿಗೆ ಹಕ್ಕು ಪತ್ರ ನೀಡಲು ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ. ಈ ಹಿನ್ನೆಯಲ್ಲಿ ಕರುಣಾಕರ ಶೆಟ್ಟಿ ಅವರು ಹಲವು ಬಾರಿ ಪ್ರತಿಭಟನೆಯನ್ನು ನಡೆಸಿದ್ದರು. ಸುಮಾರು 220 ಕುಟುಂಬಗಳಿಗೆ ವಾಸದ ಹಕ್ಕುಪತ್ರ ಸಿಕ್ಕಿಲ್ಲ. ಅರಣ್ಯ ಇಲಾಖೆ ಎನ್ಒಸಿ ನೀಡದೆ ಇರುವುದರಿಂದ ಬಡವರಿಗೆ ಹಕ್ಕು ಪತ್ರ ಸಿಗುತ್ತಿಲ್ಲ ಎಂದು ಕರುಣಾಕರ ಶೆಟ್ಟಿ ಆರೋಪಿಸಿದ್ದಾರೆ.
ಕಟ್ಟಡದ ಮೇಲೆ ಒಬ್ಬಂಟಿ ಪ್ರತಿಭಟನೆ
ವಲಯ ಅರಣ್ಯಾಧಿಕಾರಿ ಕಚೇರಿಯ ಹಂಚಿನ ಮೇಲೆ ಒಬ್ಬಂಟಿಯಾಗಿ ಕುಳಿತಿರುವ ಕರುಣಾಕರ ಶೆಟ್ಟಿ, ತಮ್ಮ ಬೇಡಿಕೆ ಈಡೇರುವವರೆಗೆ ಕೆಳಗಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಅವರು, ಡಿಎಫ್ಒ ಸ್ಥಳಕ್ಕೆ ಬರಬೇಕು. ಶ್ರೀಮಂಗತರಿಗೆಲ್ಲ ಎನ್ಒಸಿ ಸಿಗುತ್ತಿದೆ. ನನ್ನ ಜನ ಸಮಸ್ಯೆಯಲ್ಲಿದ್ದಾರೆ. ಬಡವರ ಮನೆಗಳಿಗೆ ಎನ್ಒಸಿ ಕೊಡಬೇಕು ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Mudugoppa Grama Panchayath Vice President Climbs Range Forest Office building to give NOC for Hakku Patra.