ಶಿವಮೊಗ್ಗ ಲೈವ್.ಕಾಂ | HOSANGARA NEWS | 13 JUNE 2021
ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆಯಾಗಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಈ ನಡುವೆ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದುಕೊಂಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನ ಯಡೂರಿನಲ್ಲಿ 135 ಮಿ.ಮೀ ಮಳೆಯಾಗಿದೆ. ಮಾಣಿ, ಹುಲಿಕಲ್‍ನಲ್ಲಿ 123 ಮಿ.ಮೀ, ಹೊಸನಗರದಲ್ಲಿ 119 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 106 ಮಿ.ಮೀ, ಚಕ್ರಾದಲ್ಲಿ 100 ಮಿ.ಮೀ, ಸಾವೇಹಕ್ಲುವಿನಲ್ಲಿ 96 ಮಿ.ಮೀ ಮಳೆಯಾಗಿದೆ.
ಗರಿಗೆದರಿದ ಕೃಷಿ ಚಟುವಟಿಕೆ
ಮಳೆಯಾಗುತ್ತಿದ್ದಂತೆ ತಾಲೂಕಿನಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ. ತಾಲೂಕಿನಲ್ಲಿ ಭತ್ತ ನಾಟಿ ಪ್ರಕ್ರಿಯೆ ಶುರುವಾಗಿದೆ. ಮುಸುಕಿನ ಜೋಳ ಬಿತ್ತನೆ ಕಾರ್ಯ ಆರಂಭವಾಗಿದ್ದು, 50 ಹೆಕ್ಟೇರ್‍ನಲ್ಲಿ ಈಗಾಗಲೇ ಬಿತ್ತನೆಯಾಗಿದೆ. 200 ಹೆಕ್ಟೇರ್ ಪ್ರದೇಶದಲ್ಲಿ ವಾಣಿಜ್ಯ ಬೆಳೆಗಳ ಬಿತ್ತನೆ ಕಾರ್ಯವಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]