ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 23 ಜುಲೈ 2021
ಹೊಸನಗರ ತಾಲೂಕಿನಲ್ಲಿ ದಾಖಲೆ ಮಳೆಯಾಗುತ್ತಿದೆ. ಕ್ಷಣ ಹೊತ್ತು ಬಿಡುವು ನೀಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 210.2 ಮಿ.ಮೀ ಮಳೆಯಾಗಿದೆ.
ಭಾರಿ ಮಳೆಯಿಂದಾಗಿ ತಾಲೂಕಿನ ಹಳ್ಳ,ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಹೊಳೆಯಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಇನ್ನು, ಹೊಲ, ಗದ್ದೆಗಳಲ್ಲಿ ನೀರು ನಿಂತಿರುವುದರಿಂದ ಬೆಳೆ ಹಾನಿ ಭೀತಿ ಎದುರಾಗಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ತಾಲೂಕಿನ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 192 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 196 ಮಿ.ಮೀ, ಹುಲಿಕಲ್ನಲ್ಲಿ 155 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 200 ಮಿ.ಮೀ, ಚಕ್ರಾದಲ್ಲಿ 196 ಮಿ.ಮೀ, ಸಾವೇಹಕ್ಕಲು ಡ್ಯಾಂ ಸುತ್ತಮುತ್ತ 225 ಮಿ.ಮೀ ಮಳೆಯಾಗಿದೆ.
ಮಾಣಿ ಡ್ಯಾಂಗೆ 9253 ಕ್ಯೂಸೆಕ್ ಒಳಹರಿವು ಇದೆ. ಪಿಕಪ್ ಡ್ಯಾಂನಲ್ಲಿ 2573 ಕ್ಯೂಸೆಕ್ ಒಳಹರಿವು ಇದೆ. ಚಕ್ರಾದಲ್ಲಿ 3816 ಕ್ಯೂಸೆಕ್, ಸಾವೇಹಕ್ಕಲು ಡ್ಯಾಂಗೆ 2779 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















