ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021
ಹೊಸನಗರ ತಾಲೂಕಿನಾದ್ಯಂತ ಮುಂಗಾರು ಜೋರಿದೆ. ಕಳೆದ 24 ಗಂಟೆ ಅವಧಿಯಲ್ಲಿ 169.6 ಮಿ.ಮೀ ಮಳೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾರಿ ಮಳೆಗೆ ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಂಡಗದೋದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಕಿ ಗ್ರಾಮದಲ್ಲಿ ಮಳೆಗೆ ಹಳ್ಳ ಉಕ್ಕಿ ಹರಿಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆಗೆ ಚರ್ಚಿಸಿದರು.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಹೊಸನಗರ ತಾಲೂಕಿನ ಮಾಣಿ ವ್ಯಾಪ್ತಿಯಲ್ಲಿ 117 ಮಿ.ಮೀ, ಯಡೂರಿನಲ್ಲಿ 148 ಮಿ.ಮೀ, ಹುಲಿಕಲ್‍ನಲ್ಲಿ 114 ಮ.ಮೀ, ಮಾಸ್ತಿಕಟ್ಟೆಯಲ್ಲಿ 118 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 100 ಮಿ.ಮೀ, ಸಾವೇಹಕ್ಲು 96 ಮಿ.ಮೀ ಮಳೆಯಾಗಿದೆ.
ಭಾರಿ ಮಳೆಯಿಂದಾಗಿ ಜಲಾಶಯಗಳಿಗೆ ನೀರಿನ ಒಳಹರಿವು ಏರಿಕೆಯಾಗುತ್ತಿದೆ. ಮಾಣಿ ಡ್ಯಾಂಗೆ 841 ಕ್ಯೂಸೆಕ್, ಪಿಕಪ್ ಡ್ಯಾಂಗೆ 840 ಕ್ಯೂಸೆಕ್, ಚಕ್ರಾ ಡ್ಯಾಂಗೆ 1576 ಕ್ಯುಸೆಕ್, ಸಾವೇಹಕ್ಲು ಡ್ಯಾಂಗೆ 1362 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಇವತ್ತು ಕೂಡ ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಈ ನಡುವೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ಕೂಡ ಬಿರುಸು ಪಡೆದುಕೊಂಡಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]