ರಿಪ್ಪನ್‌ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ರಿಪ್ಪನ್‌ಪೇಟೆ: ರಂಭಾಪುರಿ (rambhapuri) ಶಾಖಾ ಮಠ ಮಳಲಿ ಸಂಸ್ಥಾನ ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಸಮಾರಂಭ ನಡೆಯಿತು. ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಸ್ವಾಮೀಜಿ ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್‌

POINT-1ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲು ತುಂಬಿಕೊಂಡಿದ್ದಾನೆ. ಗೊತ್ತು ಗುರಿಗಳಿಲ್ಲದ ಜೀವನ, ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಅರಿವಿನ ಕಣ್ಣು ತೆರೆಯಿಸಲು ಧರ್ಮ ಮತ್ತು ಗುರು ಬೇಕು ಎಂಬುದನ್ನು ಅರಿತಾಗ ಬಾಳು ಸಾರ್ಥಕಗೊಳ್ಳುತ್ತದೆ ಎಂದರು.

POINT-2ಕಾರ್ತಿಕ ಮಾಸ ಬೆಳಕಿನ ಹಬ್ಬ. ಹೊರಗಿರುವ ಕತ್ತಲೆಯನ್ನು ದೀಪ ಹಚ್ಚಿ ಕಳೆಯಬಹುದು. ಆದರೆ ಒಳಗಿರುವ ಅಜ್ಞಾನವೆಂಬ ಕತ್ತಲೆಯನ್ನು ಗುರುವಿನ ಮಾರ್ಗದರ್ಶನ ಮತ್ತು ಸಂಸ್ಕಾರದಿಂದ ಮಾತ್ರ ದೂರ ಮಾಡಬಹುದು ಎಂದು ಹೇಳಿದರು. 

POINT-3ಜ್ಯೋತಿ ಬೆಳಗುತ್ತದೆ ಉರಿಯುವುದಿಲ್ಲ. ಆದರೆ ಮನುಷ್ಯ ಉರಿಯುತ್ತಿದ್ದಾನೆ ಬೆಳಗುತ್ತಿಲ್ಲ. ಬೆಳಗುವುದಕ್ಕೂ ಉರಿಯುವುದಕ್ಕೂ ಬಹಳಷ್ಟು ಅಂತರವಿದೆ. ಒಂದು ಬಾಳಿನ ವಿಕಾಸವಾದರೆ ಇನ್ನೊಂದು ನಾಶದ ಸಂಕೇತ. ಬದುಕು ಬಲಗೊಳ್ಳಬೇಕಲ್ಲದೇ ದುರ್ಬಲಗೊಳ್ಳಬಾರದು. ಹಚ್ಚುವುದಾದರೆ ದೀಪ ಹಚ್ಚಬೇಕು. ಬೆಂಕಿ ಹಚ್ಚಬಾರದು. ಆರಿಸುವುದಾದರೆ ಬೆಂಕಿ ಆರಿಸಬೇಕು ದೀಪ ಆರಿಸಬಾರದು ಎಂದು ತಿಳಿಸಿದರು.

POINT-4ಜಗ ಬೆಳಗಲು ಸೂರ್ಯ ಮನ ಬೆಳಗಲು ಗುರು ಬೇಕು. ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳಬೇಕು. ಇಲ್ಲವಾದಲ್ಲಿ ಜೀವನ ನಿರರ್ಥಕವೆಂಬ ಎಚ್ಚರಿಕೆಯನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಿದ್ಧಾಂತದ ಸಂವಿಧಾನದಲ್ಲಿ ನಿರೂಪಿಸಿದ್ದಾರೆ. ಭೌತಿಕ ಸಂಪನ್ಮೂಲಗಳಾಗಲಿ ಸಿರಿ ಸಂಪತ್ತಿನ ಸಂಗ್ರಹವಾಗಲಿ ಮನುಷ್ಯನಿಗೆ ಸಂತೃಪ್ತಿ ಸಮಾಧಾನ ತರಲಾರವು ಎಂದರು.

Rambapuri-Swamiji-at-Ripponpete-Malali-mutt

ಮಳಲಿ ಸಂಸ್ಥಾನಮಠದ ಡಾ. ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ರಿಪ್ಪನ್‌ಪೇಟೆಯ ಆರ್.ಎನ್.ಪ್ರಶಾಂತ ಪ್ರಾಸ್ತಾವಿಕವಾಗಿ ಮಾತನಾಡಿದರು, ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಮಾತನಾಡಿದರು.

ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕಿಮ್ಮನೆ ರತ್ನಾಕರ, ಚನ್ನಬಸಪ್ಪಗೌಡರು, ಬಿ.ಯುವರಾಜ, ಉಮೇಶ ಮಸರೂರು, ಹೆಚ್.ವಿ.ಈಶ್ವರಪ್ಪಗೌಡ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಅಂಗನವಾಡಿಯಲ್ಲಿ ಎರಡು ಟ್ರೇ ಮೊಟ್ಟೆ ಬೆಯಿಸಿಕೊಂಡು ಪಾನಗೋಷ್ಠಿ ಮಾಡಿದ ಕುಡುಕರು

rambhapuri

Leave a Comment