ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಣೆಯಾಗಿದ್ದ ಪತಿ ಹೆಣವಾಗಿ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

HOSANAGARA, 6 SEPTEMBER 2024 : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ (Husband) ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಸಮೀಪ ಇವತ್ತು ಪತಿಯ ಮೃತದೇಹ ಪತ್ತೆಯಾಗಿದೆ.

ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್‌ ಅವರ ಮೃತದೇಹ ಪಟಗುಪ್ಪ ಸೇತುವೆ ಸಮೀಪ ಪತ್ತೆಯಾಗಿದೆ. ಹೊಸನಗರ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

» ಪತ್ನಿ ಮೇಲೆ ಹಲ್ಲೆ ನಡೆಸಿ ನಾಪತ್ತೆ

ಕ್ಷುಲಕ ಕಾರಣಕ್ಕೆ ಸದಾನಂದ ಭಟ್ ಮತ್ತು ಅವರ ಪತ್ನಿ ಸಬೀತಾ ಅವರ ಮಧ್ಯೆ ಬುಧವಾರ ರಾತ್ರಿ ಜಗಳವಾಗಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಸಬೀತಾ ಅವರನ್ನು ಸ್ಥಳೀಯರು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ಬೆನ್ನಿಗೆ ಸದಾನಂದ ಭಟ್‌ ನಾಪತ್ತೆಯಾಗಿದ್ದರು.

ಪಟಗುಪ್ಪ ಸೇತುವೆ ಬಳಿ ಕಾರು

ಇನ್ನು, ಹೊಸನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಪಟಗುಪ್ಪ ಸೇತುವೆ ಸಮೀಪ ಗುರುವಾರ ಸದಾನಂದ ಭಟ್‌ ಅವರ ಕಾರು ಪತ್ತೆಯಾಗಿತ್ತು. ಈ ಹಿನ್ನೆಲೆ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಇವತ್ತು ಸೇತುವೆ ಸನಿಹ ಸದಾನಂದ ಭಟ್‌ ಅವರ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹೊಸನಗರ ಮತ್ತು ರಿಪ್ಪನ್‌ಪೇಟೆ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಅಪಾರ್ಟ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment