ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
RIPPONPETE : ಶಂಕಿತ ಡೆಂಗ್ಯುಗೆ (Dengue) ಯುವಕನೊಬ್ಬ ಸಾವನ್ನಪ್ಪಿದ್ದಾನೆ. ರಿಪ್ಪನ್ಪೇಟೆಯ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತ ದುರ್ದೈವಿ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜ್ವರದ ಲಕ್ಷಣದ ಹಿನ್ನೆಲೆ ಆಶಿಕ್ ರಸೂಲ್ನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇವತ್ತು ಸಂಜೆ ಕೊನೆಯುಸಿರೆಳೆದಿದ್ದಾರೆ. ಆಶಿಕ್ ರಸೂಲ್, ರಿಪ್ಪನ್ಪೇಟೆಯಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು.
ಕಳೆದ ವಾರ ರಿಪ್ಪನ್ಪೇಟೆಯ ರಶ್ಮೀ ನಾಯಕ್ ಎಂಬುವವರು ಡೆಂಗ್ಯುಗೆ ಮೃತಪಟ್ಟಿದ್ದರು. ಈಗ ಶಂಕಿತ ಡೆಂಗ್ಯುಗೆ ಆಶಿಕ್ ರಸೂಲ್ ಮೃತಪಟ್ಟಿರುವುದು ರಿಪ್ಪನ್ಪೇಟೆ ಜನರಲ್ಲಿ ಮತ್ತಷ್ಟು ಆತಂಕ ಹುಟ್ಟಿಸಿದೆ.