ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 JANUARY 2024
ರಿಪ್ಪನ್‌ಪೇಟೆ : ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಸಾಗವಾನಿ (Saguvani) ಮರಗಳನ್ನು ಕಡಿತಲೆ ಮಾಡಲಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಮರಗಳನ್ನು ಕಡಿದಿರುವ ಮಾಹಿತಿ ಲಭ್ಯವಾದ ಹಿನ್ನೆಲೆ ಅರಣ್ಯಾಧಿಕಾರಿಗಳು ಮರ ಕಡಿದಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ.
ಸ್ಥಳದಲ್ಲಿ ಬೃಹದಾಕಾರದ 5 ಸಾಗವಾನಿ ಮರಗಳನ್ನು ಕಡಿದಿರುವುದು ಕಂಡುಬಂದಿದೆ. ಬೇರೆಡೆಗೆ ಸಾಗಿಸಲು ಇರಿಸಿದ್ದ 16 ತುಂಡುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಆರ್‌ಎಫ್‌ಒ ಶರಣಪ್ಪ, ಡಿಆರ್‌ಎಫ್‌ಒ ಮಹೇಶ್ ನಾಯ್ಕ, ಅರಣ್ಯ ರಕ್ಷಕ ಕುಮಾರ್ ಮಾಂಗ್, ಅನಿಲ, ಸಿಬ್ಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಮೆಡಿಕಲ್ ಟೆಸ್ಟ್ ಬಳಿಕ ‘ಭೂತ’ ಅರೆಸ್ಟ್, 3 ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422