ಶಿವಮೊಗ್ಗ ಲೈವ್
ಹೊಸನಗರ: ಮನೆಯ ಹಿಂಭಾಗದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲ್ಲೂಕಿನ ಕೋಡೂರು ಸಮೀಪದ ಯಳಗಲ್ಲು ಗ್ರಾಮದಲ್ಲಿ ಘಟನೆ ನಡೆದಿದೆ. ಯಳಗಲ್ಲು ಗ್ರಾಮದ ಸಂದೀಪ್ (30) ಮೃತ ಯುವಕ. ಸಂದೀಪ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ರಿಪ್ಪನ್ಪೇಟೆ ಪ್ರಾಥಮಿಕ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
