ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಅಮಾನತು

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹೊಸನಗರ: ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಂ.ಅಂಜನ್ ಕುಮಾ‌ರ್ ಅವರನ್ನು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರು ಅಮಾನತುಗೊಳಿಸಿ (suspension) ಆದೇಶಿಸಿದ್ದಾರೆ.

ಅಂಜನ್ ಕುಮಾ‌ರ್ ಅವರು 2017ರಿಂದ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದು 2022ರ ಡಿಸೆಂಬ‌ರ್ 8ರಿಂದ 2023ರ ಜುಲೈ 18 ರ ವರೆಗೆ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಹಲವು ಗಂಭೀರ ಆರೋಪಗಳು ಕೇಳಿಬಂದಿತ್ತು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿತ್ತು.

Kodachadri-First-grade-college-in-Hosanagara

ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿದ್ದು, ಇದರಿಂದ ಕಾಲೇಜಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಾತಾವರಣ ಹಾಳಾಗುತ್ತಿರುವ ಕುರಿತು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಶಾಸಕರ ಮೂಲಕ ಪ್ರಾಂಶುಪಾಲರು ಶಿಕ್ಷಣ ಸಚಿವರಿಗೆ ದೂರು ಸಲ್ಲಿಸಿದ್ದರು.

ಈ ಹಿಂದೆ ಸಹ ಅವರ ವಿರುದ್ಧ ಇಲಾಖೆ ವಿಚಾರಣೆ ನಡೆದಿದ್ದರೂ ವರ್ತನೆಯಲ್ಲಿ ಬದಲಾವಣೆ ಕಾಣಿಸದಿರುವುದು ಗಮನಕ್ಕೆ ಬಂದಿದೆ. ಕಾಲೇಜಿನ ಶೈಕ್ಷಣಿಕ ವಾತಾವರಣಕ್ಕೆ ಧಕ್ಕೆ ಹಾಗೂ ಸೇವಾ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ನಡೆಸುವ ಅಗತ್ಯವಿರುವ ಕಾರಣ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಸಾಗರ, ಹೊಸನಗರ, ತೀರ್ಥಹಳ್ಳಿ ಜನರಿಗೆ ಆರೋಗ್ಯ ಇಲಾಖೆ ಎಚ್ಚರಿಕೆ, ಪ್ರಮುಖ ಸೂಚನೆ ಬಿಡುಗಡೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment