ದೇವಸ್ಥಾನದಲ್ಲಿ ಕಾಣಿಕೆ ಹಣ ಕಳ್ಳತನ, ಹೇಗಾಯ್ತು ಘಟನೆ?

ಹೊಸನಗರ: ನಗರ (Nagara) ರಸ್ತೆಯಲ್ಲಿರುವ ಶ್ರೀ ವೀರಾಂಜನೇಯ ದೇವಸ್ಥಾನದ (Temple) ಬಾಗಿಲು ಒಡೆದ ಕಳ್ಳರು ಹುಂಡಿಯಲ್ಲಿದ್ದ (Hundi) ನಗದು ಹಣ (Money) ಕಳ್ಳತನ ಮಾಡಿದ್ದಾರೆ. ಕಳ್ಳರು ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದಾರೆ. ➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ರಾತ್ರಿ ಅರ್ಚಕರು ಪೂಜೆ ಮುಗಿಸಿ ಬಾಗಿಲು ಹಾಕಿಕೊಂಡು ಮನೆಗೆ ತೆರಳಿದ್ದರು. ಮರುದಿನ ಬೆಳಿಗ್ಗೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಮುಂಭಾಗದ ಬಾಗಿಲಿನ ಬೀಗ ಒಡೆದಿರುವುದು ಕಂಡುಬಂದಿದೆ. ಕೂಡಲೇ ಅವರು ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಮಹೇಶ.ಜಿ ಅವರಿಗೆ ಮಾಹಿತಿ ನೀಡಿದ್ದರು.  

Hosanagara-Police-Station-Board

ಸ್ಥಳಕ್ಕೆ ಧಾವಿಸಿದ ದೇವಸ್ಥಾನದ ಕಮಿಟಿ ಪ್ರಮುಖರು ಪರಿಶೀಲಿಸಿದಾಗ, ಗರ್ಭಗುಡಿಯ ಮುಂಭಾಗದಲ್ಲಿದ್ದ ಒಂದು ದೊಡ್ಡ ಹಾಗೂ ಎರಡು ಚಿಕ್ಕ ಕಾಣಿಕೆ ಹುಂಡಿಗಳನ್ನು ಒಡೆಯಲಾಗಿತ್ತು. ಅವುಗಳಲ್ಲಿದ್ದ ಕಾಣಿಕೆ ಹಣವನ್ನು ಕಳ್ಳತನ ಮಾಡಲಾಗಿತ್ತು. ಹುಂಡಿಯಲ್ಲಿದ್ದ ಸುಮಾರು ₹25,000 ನಗದು ಹಣವನ್ನು ಕಳ್ಳರು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.

Hosanagara Police Station 1

ಶ್ರೀ ವೀರಾಂಜನೇಯಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಶ.ಜಿ ಅವರು ದೂರು ನೀಡಿದ್ದಾರೆ. ಹೊಸನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ ಗಾಂಧಿ ಬಜಾರ್‌ನಲ್ಲಿ ಟ್ರಾಫಿಕ್‌ ಪೊಲೀಸರನ್ನು ತಳ್ಳಿ ಹೋದ ಇಬ್ಬರು ಅರೆಸ್ಟ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌