ಶಿವಮೊಗ್ಗ ಲೈವ್.ಕಾಂ | HOSANAGARA NEWS | 26 ಆಗಸ್ಟ್ 2020
ಬೈಕ್ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹೊಸನಗರ ತಾಲೂಕು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಸುಮಾರು ಐದು ಲಕ್ಷ ಮೌಲ್ಯದ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹೇಗಾಯ್ತು ಘಟನೆ?
ಆರೋಡಿ ಕೊಡಸೆ ಸರ್ಕಾರಿ ಶಾಲೆ ಶಿಕ್ಷಕಿ ಮಂಜುಳಾ, ತಮ್ಮ ಬೈಕ್‍ನಲ್ಲಿ ತೆರಳುವಾಗ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಆರೋಡಿಯಿಂದ ಸಂಸೆ ಕಡೆಗೆ ತೆರಳುತ್ತಿದ್ದಾಗ ಬರೇಕಲ್ ಹೋಂಸ್ಟೇ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೆಲ್ಮೆಟ್, ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳು, ಶಿಕ್ಷಕಿಯನ್ನು ಅಡ್ಡಗಟ್ಟಿದ್ದಾರೆ. ಮಾರಕಾಸ್ತ್ರಗಳನ್ನು ತೋರಿಸಿ, ಬೆದರಿಸಿ ಚಿನ್ನಾಭರಣ ದೋಚಿದ್ದಾರೆ.
ಐದು ಲಕ್ಷ ಚಿನ್ನಾಭರಣ
ಶಿಕ್ಷಕಿ ಧರಿಸಿದ್ದ ಮಾಂಗಲ್ಯ ಸರ, ಬಳೆಗಳು, ಉಂಗುರಗಳು ಸೇರಿ ಸುಮಾರು 92 ಗ್ರಾಂನ ಚಿನ್ನಾಭರಣವನ್ನು ದುಷ್ಕರ್ಮಿಗಳು ದೋಚಿದ್ದಾರೆ. ಇದರ ಮೌಲ್ಯ ಸುಮಾರು ಐದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಹೊಸನಗರ ಠಾಣೆ ಸಿಪಿಐ ಮಧುಸೂದನ್, ಪಿಎಸ್ಐ ಸಿ.ಆರ್.ಕೊಪ್ಪದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]