ಬಂದೂಕು, ಮದ್ದು – ಗುಂಡು, ಕಾರು ಸಹಿತ ಕಾಡಿನಲ್ಲಿ ಮೂವರು ಅರೆಸ್ಟ್‌, ಮತ್ತಿಬ್ಬರು ಎಸ್ಕೇಪ್‌

ರಿಪ್ಪನ್‌ಪೇಟೆ: ಕಾಡು ಪ್ರಾಣಿಗಳ ಬೇಟೆಗೆ (hunting) ಸಂಚು ಹೂಡಿದ್ದ ಐವರು ಆರೋಪಿಗಳ ಪೈಕಿ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಮೂಗುಡ್ತಿ ವನ್ಯಜೀವಿ ವಲಯ ವ್ಯಾಪ್ತಿಯ ಕುಮದ್ವತಿ ಮೀಸಲು ಅರಣ್ಯದಲ್ಲಿ ಬೇಟೆಗೆ ಸಂಚು ರೂಪಿಸಿದ್ದಾಗ ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ದಾಳಿ ನಡೆಸಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಬಟ್ಟೆಮಲ್ಲಪ್ಪ ಗ್ರಾಮದ ವಿಶ್ವನಾಥ, ಬಳಸಗೋಡು ಗ್ರಾಮದ ಚನ್ನವೀರಮೂರ್ತಿ ಹಾಗೂ ಹಾಲೇಶ ಬಂಧಿತರು. ಇನ್ನಿಬ್ಬರು ಪರಾರಿಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಕಾಡಿನಲ್ಲಿ ಅನುಮಾನಾಸ್ಪದ ಓಡಾಟ

ಮಂಗಳವಾರ ಮುಂಜಾನೆ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಕಾಡಿನಲ್ಲಿ ಕೆಲವರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಆರ್‌.ಎಫ್.ಒ ನೇತೃತ್ವದ ತಂಡ ಕೃತ್ಯಕ್ಕೆ ಬಳಸಿದ್ದ ಆಲ್ಟೋ ಕಾರು ಸಹಿತ ಮೂವರು ಆರೋಪಿಗಳನ್ನು ಬಂಧಿಸಿದೆ. ನಾಡ ಬಂದೂಕು, ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

three-nabbed-in-hunting-case.

ಇದನ್ನೂ ಓದಿ » ತಾಳಗುಪ್ಪ ಆರೋಗ್ಯ ಕೇಂದ್ರಕ್ಕೆ ಗ್ರಾಮಸ್ಥರಿಂದ ಬೀಗ ಜಡಿಯುವ ಎಚ್ಚರಿಕೆ, ಕಾರಣವೇನು?

ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒ ಪುಟ್ಟಣ್ಣ ಕೆ, ಫಾರೆಸ್ಟ್ ಗಾರ್ಡ್ ಸಚಿನ್ ಕೆ.ಟಿ, ವಾಚರ್ ಸವಿನ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Prashanth-Loan-Advertisement.

three booked for hunting 

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment