NEWS HIGHLIGHTS
ಹೊಸನಗರ: ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರದ ರೆಂಬೆ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸನಗರ ತಾಲೂಕಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ಘಟನೆ ನಡೆದಿದೆ.
ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಚೋರಡಿ ಗ್ರಾಮದ ಸಂತೋಷ್ (26) ಮೃತ ದುರ್ದೈವಿ. ಬೈಕ್‌ನ ಹಿಂಬದಿ ಕುಳಿತಿದ್ದ ವೀರಭದ್ರ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತೋಷ್ ಮತ್ತು ವೀರಭದ್ರ ಬೈಕ್‌ನಲ್ಲಿ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ಮೀನು ಹಿಡಿಯಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ರಸ್ತೆ ಪಕ್ಕದಲ್ಲಿದ್ದ ಮರದ ರೆಂಬೆ ಚಲಿಸುತ್ತಿದ್ದ ಬೈಕ್ ಮೇಲೆ ಮುರಿದು ಬಿದ್ದಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ಇಬ್ಬರು ಕೆಳಗೆ ಬಿದ್ದಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.