ಮರದ ರೆಂಬೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ರಿಪ್ಪನ್‌ಪೇಟೆ: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಮರದ ರೆಂಬೆ ಮುರಿದುಬಿದ್ದು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಹಿರೇಸಾನಿ ಗ್ರಾಮದಲ್ಲಿ ನಡೆದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿ ನೀಲಾವತಿ ಬೆಳ್ಳೂರಿನಿಂದ ಸಹಪಾಠಿಗಳ ಜೊತೆಗೆ ಹಿರೇಸಾನಿಗೆ ನಡೆದುಕೊಂಡು ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಅವಘಡ ಸಂಭವಿಸಿದೆ.

Tree-Branch-falls-on-Student-at-Belluru-near-ripponpete.

ಕಾಡಂಚಿನ ರಸ್ತೆಯಲ್ಲಿ ವಿದ್ಯಾರ್ಥಿನಿಯರು ಊರಿಗೆ ಹೋಗುತ್ತಿರುವಾಗ ಗಾಳಿ-ಮಳೆ ಆರಂಭವಾಗಿದೆ. ರಭಸವಾದ ಗಾಳಿಗೆ ರಸ್ತೆ ಪಕ್ಕದಲ್ಲಿದ್ದ ಮರದ ರೆಂಬೆ ಮುರಿದಿದೆ. ಹಠಾತ್ತನೆ ಮುರಿದ ರೆಂಬೆ ವಿದ್ಯಾರ್ಥಿನಿ ಮೇಲೆ ಬಿದ್ದು ನೀಲಾವತಿ ಗಂಭೀರ ಗಾಯಗೊಂಡಿದ್ದಾರೆ. ಪಾಲಕರು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.