ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
RAILWAY NEWS : ಹಳಿ (TRACK) ಮೇಲೆ ಬೃಹತ್ ಮರ ಬಿದ್ದಿದ್ದರಿಂದ ತಾಳುಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲು ಸಂಚಾರ ಸುಮಾರು 2 ಗಂಟೆ ವ್ಯತ್ಯಯವಾಗಿದೆ. ಹೊಸನಗರ ತಾಲೂಕು ಬಟಾಣಿಜೆಡ್ಡು ಬಳಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಮರ ಬಿದ್ದಿತ್ತು. ಇದನ್ನು ಗಮನಿಸಿದ ಲೋಕೋ ಪೈಲೆಟ್ ರೈಲು ನಿಲ್ಲಿಸಿದ್ದರು. ರೈಲ್ವೆ ಇಲಾಖೆಯ ಇಂಟಿರಿಯರ್ ವರ್ಕ್ ತಂಡದ ಸದಸ್ಯರು ಕೂಡಲೆ ಸ್ಥಳಕ್ಕೆ ತೆರಳಿ ಮರ ತೆರವು ಕಾರ್ಯಾಚರಣೆ ನಡೆಸಿದರು.

ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ರೈಲು ಬೆಳಗ್ಗೆ 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿತ್ತು. ಆದರೆ ಬೆಳಗ್ಗೆ 9.05ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಿದೆ. ಬೆಳಗ್ಗೆ 9.18ಕ್ಕೆ ಶಿವಮೊಗ್ಗ ನಿಲ್ದಾಣದಿಂದ ಹೊರಟಿದೆ. ಈ ರೈಲು ಇವತ್ತು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ರೈಲಿನಲ್ಲಿ ಇಲ್ಲ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಪದವಿ ಕಾಲೇಜುಗಳಿಗೆ ರಜೆ ಇದ್ಯಾ? ಜಿಲ್ಲಾಡಳಿತದ ಸ್ಪಷ್ಟನೆ ಏನು?
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





