ಒಂದೇ ಸೇತುವೆ ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಒಬ್ಬನ ಸ್ಥಿತಿ ಗಂಭೀರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 AUGUST 2023

HOSANAGARA : ಹಿಲ್ಕುಂಜಿ ಸೇತುವೆ (Bridge) ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ.

ಅಪಘಾತ 1 : ಶಿಕಾರಿಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಲ್ಕುಂಜಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿದೆ. ಲಾರಿಯಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕಾರಣಗಿರಿ ನಿವಾಸಿ ವಿಜೇಂದ್ರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿದಾಯತ್‌ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿದೆ.

ಇದನ್ನೂ ಓದಿ – ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ

ಅಪಘಾತ 2 : ಹರಿಹರದಿಂದ ಮಂಗಳೂರಿಗೆ ತೆರಳುತ್ತಿದ್ದ 14 ಚಕ್ರದ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಲ್ಕುಂಜಿ ಸೇತುವೆಗೆ (Bridge) ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದೆ. ಲಾರಿ ಸೇತುವೆಯಿಂದ ಕೆಳಗೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನಿಗೆ ಯಾವುದೆ ಪ್ರಾಣಪಾಯವಾಗಿಲ್ಲ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment