ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 AUGUST 2023
HOSANAGARA : ಹಿಲ್ಕುಂಜಿ ಸೇತುವೆ (Bridge) ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಪಘಾತ 1 : ಶಿಕಾರಿಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಹಿಲ್ಕುಂಜಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಪ್ರಪಾತಕ್ಕೆ ಉರುಳಿದೆ. ಲಾರಿಯಲ್ಲಿ ಚಾಲಕ ಸೇರಿ ಇಬ್ಬರು ಇದ್ದರು. ಕಾರಣಗಿರಿ ನಿವಾಸಿ ವಿಜೇಂದ್ರ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿದಾಯತ್ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ
ಅಪಘಾತ 2 : ಹರಿಹರದಿಂದ ಮಂಗಳೂರಿಗೆ ತೆರಳುತ್ತಿದ್ದ 14 ಚಕ್ರದ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಲ್ಕುಂಜಿ ಸೇತುವೆಗೆ (Bridge) ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದೆ. ಲಾರಿ ಸೇತುವೆಯಿಂದ ಕೆಳಗೆ ಬೀಳುವುದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನಿಗೆ ಯಾವುದೆ ಪ್ರಾಣಪಾಯವಾಗಿಲ್ಲ.