ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 10 ಸೆಪ್ಟೆಂಬರ್ 2019
ಗಣಪತಿ ಮೆರವಣಿಗೆಯಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆಯಾಗಿ, ಇಬ್ಬರು ಯುವಕರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಯುವಕರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೂರ್ಯ ಮತ್ತು ಕುಮಾರ್ ಎಂಬುವವರಿಗೆ ಚಾಕು ಇರಿತಕ್ಕೆ ಒಳಗಾದವರು. ರಿಪ್ಪನ್’ಪೇಟೆಯಲ್ಲಿ ಇಂದು ಸಂಜೆ ಗಣಪತಿ ವಿಸರ್ಜನೆ ವೇಳೆ ಹೆಣ್ಣು ಮಕ್ಕಳು ನೃತ್ಯ ಮಾಡುತ್ತಿದ್ದರು. ಈ ವೇಳೆ ಕೆಲವು ಯುವಕರು ಅವರ ನಡುವೆ ಡಾನ್ಸ್ ಮಾಡಲು ಮುಂದಾಗಿದ್ದಾರೆ. ಸೂರ್ಯ ಮತ್ತು ಕುಮಾರ್ ಅವರು ಇದನ್ನು ವಿರೋಧಿಸಿದ್ದಾರೆ.
ಇದರಿಂದ ಕುಪಿತಗೊಂಡ ಯುವಕರು ಸೂರ್ಯ ಮತ್ತು ಕುಮಾರ್’ಗೆ ಚಾಕುವಿನಿಂದ ಇರಿದಿದ್ದಾರೆ. ಘಟನೆ ಸಂಬಂಧ ಧನುಷ್ ಮತ್ತು ಸುಚಿತ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದ್ದಿದ್ದಾರೆ ಎಂದು ತಿಳಿದು ಬಂದಿದೆ. ಜೋಸೆಫ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹಳೆ ವೈಷಮ್ಯವು ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





