ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 APRIL 2023
RIPPONPETE : ಗ್ರಾಮ ಪಂಚಾಯಿತಿಯಿಂದ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ (Protest) ನಡೆಸಿದರು. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂದಾಳದಿಂಬ ಗ್ರಾಮದಲ್ಲಿ ಮಹಿಳೆಯರು ಪ್ರತಿಭಟಿಸಿದರು.
ಚಂದಾಳದಿಂಬ ಗ್ರಾಮದಲ್ಲಿ 50ಕ್ಕಿಂತಲೂ ಹೆಚ್ಚು ಮನೆಗಳಿವೆ. ಶುದ್ಧ ಕುಡಿಯುವ ನೀರು ಸಿಗದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ನಲ್ಲಿ ಸಂಪರ್ಕ ನೀಡಿದ್ದರೂ ನೀರು ಪೂರೈಕೆಯಾಗುತ್ತಿಲ್ಲ. ಜನರು ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಟ್ಯಾಂಕರ್ನಲ್ಲಿ ನೀರು ಪೂರೈಕೆ ಮಾಡಲಾಯಿತು. ಈ ನೀರು ಕುಲುಷಿತವಾಗಿದ್ದು, ಸೇವಿಸಿದ ಮಕ್ಕಳು ಸೇರಿದಂತೆ ಹಲವರು ಅಸ್ವಸ್ಥಗೊಂಡಿದ್ದಾರೆ ಎಂದು ಪ್ರತಿಭಟನಾಕಾರರು (Protest) ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ
ಕೂಡಲೆ ತಮ್ಮೂರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ದಿಗ್ಬಂಧನ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422