BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

ಹೊಸನಗರ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹೊಸನಗರ ತಾಲೂಕು ಹುಲಿಕಲ್‌ ಘಾಟಿ (Hulikal Ghat) ರಸ್ತೆ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ. ಹಲವು ಕಾರ್ಮಿಕರು ಗಾಯಗೊಂಡಿರುವ ಶಂಕೆ ಇದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ಘಟನೆಯಾಗಿದೆ. ಹೇರ್‌ಪಿನ್‌ ತಿರುವಿನಲ್ಲಿ ಮಣ್ಣು ಕುಸಿಯುತಿತ್ತು. ಈ ಹಿನ್ನೆಲೆ ರಸ್ತೆ ರಿಪೇರಿ ಕಾಮಗಾರಿ ನಡೆಸಲಾಗುತಿತ್ತು. ಇಂದು ಸಂಜೆ ಕಾರ್ಮಿಕರ ಮೇಲೆ ಮಣ್ಣು ಜಾರಿದೆ. ಮಣ್ಣಿನ ಅಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ಕುರಿತು ಪೊಲೀಸ್‌ ಮೂಲಗಳು ಖಚಿತಪಡಿಸಿವೆ. ಮಣ್ಣಿನ ಅಡಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.  

Hulikal-Ghat-

Hulikal-Ghat-

ಇದನ್ನೂ ಓದಿ : ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

Leave a Comment