ಹೊಸನಗರದಲ್ಲಿ ಯುವಕನನ್ನು ವಶಕ್ಕೆ ಪಡೆದ ಪೊಲೀಸರು, ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್

ಹೊಸನಗರ: ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು (Youth Arrest) ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಆತ ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಆತನನ್ನು ಬಂದಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರ ಪೊಲೀಸರು ಗಸ್ತಿನಲ್ಲಿದ್ದಾಗ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ಸುಬ್ರಮಣ್ಯ(26) ಎಂಬಾತ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡುಬಂದಿದ್ದು, ವಿಚಾರಣೆ ಮಾಡಿದಾಗ ತಾನು ಗಾಂಜಾ ಸೇವಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಬಳಿಕ ವೈದ್ಯಕೀಯ ತಪಾಸಣೆಯಲ್ಲಿ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್‌ಡಿಪಿಎಸ್ ಆಕ್ಟ್27(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಡಿಜಿ ಐಜಿಪಿ ಭೇಟಿ, ಮಹತ್ವದ ಮೀಟಿಂಗ್‌, ಪೊಲೀಸರಿಗೆ ಖಡಕ್‌ ಸೂಚನೆ

Leave a Comment