ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಜೂನ್ 2020
ಜೂಸ್ ಕಬ್ಬು ವ್ಯಾಪಾರಿ ಜೊತೆಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಯುವಕನಿಗೂ ಕರೋನ ಸೋಂಕು ಕಾಣಿಸಿಕೊಂಡಿದೆ. ಸ್ನೇಹಿತನಿಗೆ ಕರೋನ ಸೋಂಕು ತಗುಲಿರುವ ವಿಚಾರ ತಿಳಿದು ಯುವಕ ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಟ್ಟಿದ್ದರು.
ರಿಪ್ಪನ್‍ಪೇಟೆ ಸಮೀಪದ ಗ್ರಾಮವೊಂದರ ಜೂಸ್ ಕಬ್ಬು ವ್ಯಾಪಾರಿಗೆ ಕರೋನ ಸೋಂಕು ತಗುಲಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ, ಅವರೊಂದಿಗೆ ಮದುವೆ ಬೀಗರ ಊಟಕ್ಕೆ ಹೋಗಿದ್ದ ಸ್ವಯಂ ಪ್ರೇರಿತವಾಗಿ ಹೋಗಿ ತಪಾಸಣೆಗೆ ಒಳಪಟ್ಟಿದ್ದರು.
ಊರು ಸೀಲ್ ಡೌನ್, ಕುಟುಂಬದ ಮೇಲೆ ನಿಗಾ
ಯುವಕನಿಗೆ ಕರೋನ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ, ಹೊಸನಗರದ ಪಾಶೆಟ್ಟಿಕೊಪ್ಪ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಈ ಗ್ರಾಮದಲ್ಲಿ 82 ಮನೆಗಳಿವೆ. ಗ್ರಾಮದಲ್ಲಿರುವವರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಯುವಕನ ಕುಟುಂಬದವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.
ತಾಲೂಕು ಪಂಚಾಯಿತಿ ಇಓ ಪ್ರವೀಣ್ ಕುಮಾರ್, ಟಿಹೆಚ್ಓ ಡಾ.ಸುರೇಶ್, ಉಪ ತಹಶೀಲ್ದಾರ್ ಪ್ರದೀಪ್, ಕಂದಾಯ ನಿರೀಕ್ಷಕ ಇನಾಯತ್, ಪಿಡಿಒ ಮುರುಗೇಶ್ ಸೀಲ್ ಡೌನ್ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















